Breaking News

ಶೆಟ್ಟರ್‌ ಘರ್‌ ವಾಪ್ಸಿಗೆ ಬಿಜೆಪಿ ಶತಪ್ರಯತ್ನ; ಬಿಟ್ಟು ಹೋಗಲ್ಲ ಎಂದ ಸಿದ್ದರಾಮಯ್ಯ

Spread the love

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Parliament Elections 2024) ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲೇಬೇಕು ಎಂಬ ಶತ ಪ್ರಯತ್ನದಲ್ಲಿರುವ ಬಿಜೆಪಿ-ಜೆಡಿಎಸ್‌ ಮೈತ್ರಿ ಕೂಟ (BJP-JDS Alliance) ಈಗ ಕಾಂಗ್ರೆಸ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Former CM Jagadish Shettar) ಅವರನ್ನು ಹೇಗಾದರೂ ಮಾಡಿ ಘರ್‌ ವಾಪ್ಸಿ (Shettar Ghar Wapsi) ಮಾಡಬೇಕು ಎಂದು ಪ್ರಯತ್ನಿಸುತ್ತಿದೆ.

ಈಗಾಗಲೇ ಬಿಜೆಪಿ ಜಗದೀಶ್‌ ಶೆಟ್ಟರ್‌ ಅವರನ್ನು ಸಂಪರ್ಕಿಸಿದೆ ಎಂದು ಹೇಳಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಮಾತ್ರ ಯಾವ ಕಾರಣಕ್ಕೂ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಬಿಟ್ಟು ಹೋಗುವುದಿಲ್ಲ ಎಂದಿದ್ದಾರೆ.

ಬಿಜೆಪಿಯು ಕಾಂಗ್ರೆಸ್‌ಗೆ ಹೋಗಿರುವ ಇಬ್ಬರು ಪ್ರಮುಖ ನಾಯಕರಾದ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಅವರನ್ನು ಮರಳಿ ಕರೆ ತರುವ ಪ್ರಯತ್ನ ನಡೆಸುತ್ತಿದೆ. ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಪಕ್ಷಕ್ಕೆ ಇದು ಅನಿವಾರ್ಯವಾಗಿದೆ. ಉತ್ತರ ಕರ್ನಾಟಕದಲ್ಲಿ ಈ ಇಬ್ಬರು ನಾಯಕರಿಲ್ಲದೆ ಗೆಲುವು ಕಷ್ಟ ಎಂಬ ವಾತಾವರಣ ಇದೆ. ಜತೆಗೆ ಅವರು ಬಂದರೆ ಗೆಲುವು ಸಾಧ್ಯ ಎಂಬ ಮಾತನ್ನು ‌ ಜಿಲ್ಲಾ ಘಟಕಗಳು ಹೇಳುತ್ತಿವೆ. ಶೆಟ್ಟರ್‌ ಅವರಿಗೆ ವೈಯಕ್ತಿಕ ವರ್ಚಸ್ಸು ಅಷ್ಟೇನೂ ಇಲ್ಲದಿದ್ದರೂ ಅವರಿಗೆ ಕೆಲವೊಂದು ಕ್ಷೇತ್ರಗಳಲ್ಲಿ ಗೆಲ್ಲಿಸುವ ಶಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಬಿಜೆಪಿ ಬಿಟ್ಟು ಹೋಗಿರುವ ಜನಾರ್ದನ ರೆಡ್ಡಿ ಅವರನ್ನೂ ಮರಳಿ ಕರೆತರುವ ಚಿಂತನೆ ಇದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ