Breaking News

ಫೆ.16ಕ್ಕೆ ರಾಜ್ಯ ಬಜೆಟ್ ಬೇಡ: ಮುಂದಕ್ಕೆ ಹಾಕುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

Spread the love

ಬೆಂಗಳೂರು: ಫೆಬ್ರವರಿ 16ರಂದು ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇದೆ. ಈ ಚುನಾವಣೆ ದಿನದಂದು ಕಾಂಗ್ರೆಸ್‌ ಸರ್ಕಾರ ರಾಜ್ಯ ಬಜೆಟ್ (Karnataka Budget 2024) ಮಂಡಿಸುವುದು ಸರಿಯಲ್ಲ. ಇದು ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ (Model Code of Conduct and Representation of the People Act) ಪ್ರಕಾರ ಇದು ನ್ಯಾಯಬದ್ಧವಲ್ಲ.

ಹೀಗಾಗಿ ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಬೇಕು ಎಂದು ರಾಜ್ಯ ಬಿಜೆಪಿಯು (BJP Karnataka) ರಾಜ್ಯಪಾಲರ ಕದ ತಟ್ಟಿದೆ. ರಾಜ್ಯಪಾಲರಿಗೆ ಈ ಬಗ್ಗೆ ಮನವಿ ಮಾಡಿದ್ದು, ಮಧ್ಯಪ್ರವೇಶ ಮಾಡುವಂತೆ ಕೇಳಿಕೊಂಡಿದೆ.

ರಾಜಭವನದಲ್ಲಿ ಈ ಕುರಿತು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗವು, ಅಂದು ಬೆಂಗಳೂರಿನ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇರುವುದರಿಂದ ಯಾವುದೇ ಕಾರಣಕ್ಕೂ ರಾಜ್ಯ ಬಜೆಟ್‌ ಮಂಡನೆ ಮಾಡುವುದು ಸರಿಯಲ್ಲ. ಹೀಗಾಗಿ ದಿನಾಂಕವನ್ನು ಮುಂದಕ್ಕೆ ಹಾಕಬೇಕು ಎಂದು ಮನವಿ ಮಾಡಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ