Breaking News

ಬಗೆಹರಿಯುತ್ತಿಲ್ಲ ನಿಗಮ ಮಂಡಳಿ ಕಗ್ಗಂಟು

Spread the love

ಬೆಂಗಳೂರು, ಜನವರಿ 24: ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್​​ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೀಗ ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ (Congress High Command) ನಡುವಣ ಸಂಘರ್ಷವಾಗಿ ಮಾರ್ಪಟ್ಟಿದೆ. ಹೈಕಮಾಂಡ್ ಕಳುಹಿಸಿರುವ ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಕಾಣಿಸಿವೆ ಎನ್ನಲಾಗಿದ್ದು, ಇದನ್ನು ಅಂತಿಮಗೊಳಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮತಿಸುತ್ತಿಲ್ಲ. ಈ ವಿಚಾರವಾಗಿ ಸಿದ್ದರಾಮಯ್ಯ (Siddaramaiah)ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಮಾತುಕತೆಯನ್ನೂ ನಡೆಸಿದ್ದಾರೆ.

ನಿಗಮ ಮಂಡಳಿ ಹಂಚಿಕೆ ವಿಚಾರ ಇದೀಗ ಮತ್ತೆ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ. ಹೈಕಮಾಂಡ್ ಪಟ್ಟಿಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ ನಡೆಗೆ ಸಿಎಂ ಹಾಗೂ ಡಿಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸುರ್ಜೇವಾಲ ಬೆಂಗಳೂರಿಗೆ ಮತ್ತೆ ಆಗಮಿಸುತ್ತಿದ್ದಾರೆ.

ಮತ್ತೊಂದು ಸುತ್ತಿನ ಸಭೆ

ನಿಗಮ ಮಂಡಳಿ ಕುರಿತು ಮತ್ತೆ ಚರ್ಚಿಸಲು ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರಲಿದ್ದು, ಜನವರಿ 26ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಅದೇ ದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ಖರ್ಗೆ ಉಪಸ್ಥಿತಿಯಲ್ಲೇ ಮತ್ತೊಂದು ಸುತ್ತಿನ ಚರ್ಚೆ ನಡೆಯುವ ಸಾಧ್ಯತೆ ಇದೆ.

ಹೈಕಮಾಂಡ್ ನಾಯಕರು ತಮ್ಮನ್ನು ಪರಿಗಣಿಸಿಲ್ಲ ಎಂದು ಮತ್ತೊಂದು ಕಡೆ ಸಚಿವರಿಗೂ ಬೇಸರ ಉಂಟಾಗಿದೆ. ಹೀಗಾಗಿ ಗೊಂದಲ ಬಗೆಹರಿಸಲು ಮತ್ತೆ ಹೈಕಮಾಂಡ್ ನಾಯಕರು ರಾಜ್ಯಕ್ಕೆ ಬರುತ್ತಿದ್ದಾರೆ.

ನಿಗಮ ಮಂಡಳಿಗಳಿಗೆ ಶಾಸಕರ ನೇಮಕವೆಲ್ಲ ಅಂತಿಮೊಂಡಿದೆ. ಪಕ್ಷದ ಕಾರ್ಯಕರ್ತರ ನೇಮಕದ ಬಗ್ಗೆ ಚರ್ಚೆಯಾಗುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಜತೆ ಚರ್ಚೆ ನಡೆಸುತ್ತಿದ್ದೇವೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಪಟ್ಟಿಗೆ ಸಹಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದರು


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ