ಬೆಂಗಳೂರು: ಸದ್ಯ ಕಾಂಗ್ರೆಸ್‌ನಲ್ಲಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಘರ್ ವಾಪಸ್ಸಿ ಸುದ್ದಿ ಕೇಳಿ ಬರುತ್ತಿರುವ ಬೆನ್ನಲ್ಲೆ ಇಂದು ಅವರು ದೆಹಲಿಗೆ ಹಾರಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.
ಜಗದೀಶ ಶೆಟ್ಟರ ಅವರು ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಜೊತೆಯಲ್ಲಿ ದೆಹಲಿಗೆ ಭೇಟಿ ನೀಡಿರೋದು ಅಚ್ಚರಿಗೆ ಕಾರಣವಾಗಿದೆ.
ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದೆಹಲಿಯಲ್ಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಜಗದೀಶ್ ಶೆಟ್ಟರ್ ಮಹತ್ವದ ಮಾತುಕತೆ ನಡೆಸಿರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಬುಧವಾರವಷ್ಟೇ ಯಡಿಯೂಪ್ಪ ಮತ್ತು ವಿಜಯೇಂದ್ರ ಅವರು ಯಾವ ಮಾಹಿತಯನ್ನು ನೀಡದೇ ರಹಸ್ಯವಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ರಾಜ್ಯದ ಪ್ರಮುಖ ಬಿಜೆಪಿ ನಾಯಕರು ದೆಹಲಿಯಲ್ಲಿರುವಾಗಲೇ ಜಗದೀಶ್ ಶೆಟ್ಟರ್ ರಾಷ್ಟ್ರ ರಾಜಧಾನಿಗೆ ತೆರಳಿರೋದು ಅಚ್ಚರಿಗೆ ಕಾರಣವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.