ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. 2006ರ ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ನೌಕರರು, ರಾಷ್ಟ್ರೀಯ ಪಿಂಚಣಿ ಯೋಜನೆ (National pension scheme-NPS) ವ್ಯಾಪ್ತಿಯಿಂದ ಹಳೆಯ ಪಿಂಚಣಿ ಯೋಜನೆಗೆ (Old Pension Scheme-OPS) ಬದಲಾಗಲು ಅವಕಾಶ ಮಾಡಿಕೊಟ್ಟಿದೆ.
ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು ರಾಜ್ಯ ಸರ್ಕಾರ ವಿಧಿಸಿದೆ.
ಹಳೆಯ ಪಿಂಚಣಿ ಸೇವೆಗೆ ಒಳಪಡಲು ಸರ್ಕಾರಿ ನೌಕರರು ತಾವೇ ಒಪ್ಪಿಗೆ ಸೂಚಿಸಬೇಕು. 2006ರ ಏಪ್ರಿಲ್‌ಗಿಂತ ಮೊದಲು ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಹಳೆಯ ಪಿಂಚಣಿ ಸೇವೆಗೆ ಒಳಪಟ್ಟರೆ, ಬದಲಾವಣೆಗೆ ಮತ್ತೆ ಅವಕಾಶವಿರುವುದಿಲ್ಲ. ಇನ್ನು ಒಪಿಎಸ್‌ಗೆ ಒಳಪಡದೆ ಹೋದರೆ ಅಂತಹ ನೌಕರರು ಎನ್‌ಪಿಎಸ್‌ನಲ್ಲೇ ಮುಂದುವರಿಯುತ್ತಾರೆ.