Breaking News

ಸರ್ಕಾರ ಟೋಪಿ ಹಾಕುವ ಚಾಳಿ ಮುಂದುವರಿಸಿದೆ: ಹೆಚ್ ಡಿಕೆ ಟೀಕೆ

Spread the love

ಬೆಂಗಳೂರು: ರಾಜ್ಯ ಸರ್ಕಾರದ ನಾನಾ ಇಲಾಖೆಗಳ ಸುಮಾರು 11,366 ನೌಕರರು ಒಪಿಎಸ್ (ಹಳೆಯ ನಿಶ್ಚಿತ ಪಿಂಚಣಿ ಯೋಜನೆ) ವ್ಯಾಪ್ತಿಗೆ ಒಳಪಡಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಸರ್ಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿಯನ್ನು ಮುಂದುವರಿಸಿದೆ ಎಂದು ಹೇಳಿದ್ದಾರೆ.

 

ಈ ಬಗ್ಗೆ ಎಕ್ಸ್ ನಲ್ಲಿ (X) ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯ ಕಾಂಗ್ರೆಸ್ (Karnataka Congress) ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ (Supreme Court) ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲಾ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರಕಾರದ ಘನಂದಾರಿ ಸಾಧನೆ ಏನೂ ಇಲ್ಲ” ಎಂದಿದ್ದಾರೆ.

ಅಲ್ಲದೇ, ಮೇ ತಿಂಗಳಲ್ಲಿಯೇ OPS ಜಾರಿ ಮಾಡುವ ಭರವಸೆ ನೀಡಿದ್ದರು ಸಿದ್ದರಾಮಯ್ಯ. 2023 ಮೇ 20ರಂದು ಪ್ರಮಾಣ ಸ್ವೀಕರಿಸಿದ ಅವರು, ಸರಕಾರ ಬಂದ ಎರಡೇ ದಿನಕ್ಕೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದಿತ್ತು. ಅವರು ಚುನಾವಣಾ ಫಸಲು ತೆಗೆಯಲು ಹತ್ತು ತಿಂಗಳು ಹೊಂಚು ಹಾಕಿ ಕೂತರು. ಇದು ಚುನಾವಣೆ ಗಿಮಿಕ್ ಅಷ್ಟೇ, ಅನುಮಾನವೇ ಇಲ್ಲ. 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಗೊಂಡ 13,000 ನೌಕರರು ಹಳೆ ಪಿಂಚಣಿ ವ್ಯಾಪ್ತಿಗೆ ಬರುತ್ತಾರೆ ಎಂದು ಈ ಆದೇಶ ಹೇಳುತ್ತದೆ. ಈ ಗ್ಯಾರಂಟಿ ಸರಕಾರಕ್ಕೆ ಈ ನಿರ್ಧಾರ ತೆಗೆದುಕೊಳ್ಳುವುದಕ್ಕೆ 10 ತಿಂಗಳೇ ಬೇಕಾಯಿತು! ಮಾತೆತ್ತಿದರೆ ಮೋದಿ ಅವರನ್ನು ನಿಂದಿಸುವ ಸಿದ್ದರಾಮಯ್ಯ (CM Siddaramaiah) ಅವರದ್ದು ಕೆಲಸದಲ್ಲಿ ಆಮೆವೇಗ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ವ್ಯಂಗ್ಯವಾಡಿದ್ದಾರೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ