Breaking News

ಖಾನಾಪುರ: ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಮಹಿಳೆಗೆ ಹಾವು ಕಡಿತ

Spread the love

ಖಾನಾಪುರ: ತಾಲ್ಲೂಕಿನ ಜಾಂಬೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ನರೇಗಾ ಕಾಮಗಾರಿಯಲ್ಲಿ ತೊಡಗಿದ್ದ ಕೂಲಿಕಾರ ಮಹಿಳೆಗೆ ಹಾವು ಕಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ‌.

ಜಾಂಬೋಟಿ‌ ನಿವಾಸಿ ಸವಿತಾ ಸಾಬಳೆ(55) ಗಾಯಾಳು. ಕೂಲಿ ಕೆಲಸದಲ್ಲಿ ನಿರತರಾಗಿದ್ದ ಸವಿತಾ ಅವರಿಗೆ ಹಾವು ಕಚ್ಚಿದ ವಿಷಯ ತಿಳಿದ ಕೂಡಲೇ ಸ್ಥಳದಲ್ಲಿದ್ದ ಗ್ರಾಮ ಪಂಚಾಯಿತಿ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು.

 

ಚಿಕಿತ್ಸೆ ನೀಡಿದ ವೈದ್ಯರು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿ ಗುಣಮುಖರಾಗಿದ್ದಾರೆ.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಏಗನಗೌಡರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಮಹಿಳೆಯ ಆರೋಗ್ಯ ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಪಿಡಿಒ ಆನಂದ ಭಿಂಗೆ ಹಾಗೂ ಗ್ರಾಪಂ ಸಿಬ್ಬಂದಿ ಸುನೀಲ ಪಾಟೀಲ ಜೊತೆಗಿದ್ದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ