Breaking News

ಬಜೆಟ್‌ ಅಧಿವೇಶನಕ್ಕೂ ಮುನ್ನವೇ ಸಂಸದರ ಅಮಾನತು ಆದೇಶ ವಾಪಸ್‌!

Spread the love

ವದೆಹಲಿ: ಬುಧವಾರದಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನಕ್ಕೆ ಮೊದಲೇ ಅಮಾನತ್ತಿಗೊಳಗಾಗಿದ್ದ ಹನ್ನೊಂದು ಮಂದಿ ರಾಜ್ಯಸಭಾ ಸಂಸದರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

 

146 ಸಂಸದರಲ್ಲಿ 132 ಸಂಸದರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತುಗೊಳಿಸಲಾಗಿದ್ದು, ಎರಡೂ ಸದನಗಳನ್ನು ಮುಂದೂಡಿದಾಗ, ಅವರ ಅಮಾನತು ಹಿಂತೆಗೆದುಕೊಳ್ಳಲಾಗಿದೆ ಎಂದು ಸಂಸತ್‌ ಭವನದ ಅಧಿಕಾರಿಗಳು ತಿಳಿಸಿದ್ದಾರೆ.

 

ಉಳಿದ 14 ಸಂಸದರನ್ನು – ರಾಜ್ಯಸಭೆಯ 11 ಮತ್ತು ಲೋಕಸಭೆಯ ಮೂವರು – ಹಕ್ಕುಬಾಧ್ಯತಾ ಸಮಿತಿಗಳು ತಮ್ಮ ವಿಷಯವನ್ನು ನಿರ್ಧರಿಸುವವರೆಗೆ ಅಮಾನತುಗೊಳಿಸಲಾಗಿದೆ.

ಲೋಕಸಭೆಯ ಹಕ್ಕುಬಾಧ್ಯತಾ ಸಮಿತಿಯು ಜ. 11 ರಂದು 11 ಲೋಕಸಭಾ ಸಂಸದರ ಅಮಾನತು ಆದೇಶವನ್ನು ಹಿಂಪಡೆದಿತ್ತು.


Spread the love

About Laxminews 24x7

Check Also

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.

Spread the love ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ