Breaking News

ಬಾವಿಗೆ ಜಿಗಿದ ತಂಗಿ ಕಾಪಾಡಲು ತಾನೂ ಬಾವಿಗೆ ಹಾರಿದ; ಅಣ್ಣ

Spread the love

ಕಲಬುರಗಿ, ಜ.30: ಕಾಲೇಜಿಗೆ ಹೋಗು ಎಂದು ಅಣ್ಣ ಬೈದು ಬುದ್ದಿ ಹೇಳಿದ್ದಕ್ಕೆ ಮನ ನೊಂದ ತಂಗಿ ಓಡಿ ಹೋಗಿ ಬಾವಿಗೆ ಜಿಗಿದಿದ್ದು ತಂಗಿ ಕಾಪಾಡಲು ಅಣ್ಣ ಕೂಡ ಬಾವಿಗೆ ಹಾರಿ ಪ್ರಾಣ (Death) ಕಳೆದುಕೊಂಡ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದು ಅಣ್ಣ, ತಂಗಿ ಇಬ್ಬರೂ ಮೃತಪಟ್ಟಿದ್ದಾರೆ. ತಂಗಿ ನಂದಿನಿ(18), ಅಣ್ಣ ಸಂದೀಪ್(21) ಮೃತ ದುರ್ದೈವಿಗಳು. ​​

ನಂದಿನಿ ಕಾಲೇಜಿಗೆ ಹೋಗಲಿಲ್ಲ ಎಂದು ಕೋಪಗೊಂಡಿದ್ದ ಸಂದೀಪ್ ಕಾಲೇಜಿಗೆ ಹೋಗು ಎಂದು ಬೈದು ಬುದ್ದಿ ಹೇಳಿದ್ದ. ಇಷ್ಟಕ್ಕೇ ನೊಂದಿಕೊಂಡ ನಂದಿನಿ ಮನೆ ಬಳಿಯಿದ್ದ ಬಾವಿಗೆ ಹಾರಿದ್ದಾಳೆ. ತಂಗಿ ಬಾವಿಗೆ ಜಿಗಿದಿದ್ದು ತಿಳಿಯುತ್ತಿದ್ದಂತೆ ತಂಗಿ ಕಾಪಾಡಲು ಸಂದೀಪ್ ಕೂಡ ಬಾವಿಗೆ ಹಾರಿದ್ದಾನೆ. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟಿದ್ದಾರೆ. ಬಾವಿಯ ದಡದಲ್ಲಿ ನಂದಿನಿ ತಲೆಗೆ ಹೂವಿನ ಗೊಂಚಲು ಮುಡಿದುಕೊಂಡdನ್ನು ಗಮನಿಸಿದ ಹೆತ್ತವರು ಅನುಮಾನಗೊಂಡು ಕಾರ್ಯಾಚರಣೆ ನಡೆಸಿದ ನಂತರ ಬಾವಿಯಲ್ಲಿ ಅಣ್ಣ ತಂಗಿಯ ಶವ ಪತ್ತೆಯಾಗಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ