ಬೆಂಗಳೂರು, ಜ.30: ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿಬೆಂಗಳೂರುವಿಶ್ವವಿದ್ಯಾಲಯದ (Bengaluru University) ಹಾಸ್ಟೆಲ್ ಊಟದಲ್ಲಿ ಹುಳ ಪತ್ತೆಯಾಗಿದೆ.
ಈ ಬಾರಿ ವಿದ್ಯಾರ್ಥಿಗಳು “ಕಟ್ಟುಪಾಡು ಬದಲಾಗದು” ಎಂಬ ಶೀರ್ಷಿಕೆಯಡಿ ಕವನದ ಮೂಲಕ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ವಸತಿ ಶಾಲೆಯ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಕಳಪೆ ಆಹಾರ ತಿಂದು ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗಿದ್ದು, ಊಟದಲ್ಲಿ ಹುಳ ಇದೆ ಎಂದರೆ ಅಡ್ಜೆಸ್ಟ್ ಮಾಡಿ ಎಂಬ ಅಸಡ್ಡೆಯ ಉತ್ತರ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಇದರಿಂದ ಬೇಸತ್ತ ವಿದ್ಯಾರ್ಥಿಗಳು ಕಟ್ಟುಪಾಡು ಬದಲಾಗದು ಎಂಬ ಶೀರ್ಷಿಕೆಯಡಿ ಕವನ ಬರೆದಿದ್ದು, ಬದಲಿಸಲು ಮುಂದೆ ಬಂದರೆ ಎತ್ತಂಗಡಿ ಕಟ್ಟಿಟ್ಟ ಬುತ್ತಿ ಎಂದು ಕವನದಲ್ಲಿ ಉಲ್ಲೇಖಿಸಲಾಗಿದೆ.