ರಾಮನಗರ : ಲೋಕಸಭಾ ಚುನಾವಣೆಯಲ್ಲಿ (Lokasabha election 2024) ಕಾಂಗ್ರೆಸ್ (Congress) ಸೋಲನ್ನಪ್ಪಿದರೆ ಗ್ಯಾರೆಂಟಿ ಯೋಜನೆಗಳು (Congress Guaratnee scheme) ರದ್ದಾಗಬಹುದು ಎಂದು ಮಾಗಡಿ (Magadi) ಶಾಸಕ ಎಚ್.ಸಿ. ಬಾಲಕೃಷ್ಣ (H C Balakrishna) ಹೇಳಿಕೆ ನೀಡಿದ್ದಾರೆ.
ಮಂಗಳವಾರ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದಿದ್ದರೆ, ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು ಜನರಿಗೆ ಇಷ್ಟವಿಲ್ಲ ಎಂಬ ಅರ್ಥ ಹೊಮ್ಮುತ್ತದೆ. ಹೀಗಾಗಿ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಸಾಧ್ಯತೆಯಿದೆ ಎಂದಿದ್ದಾರೆ.
ಶಾಸಕ ಎಚ್. ಸಿ. ಬಾಲಕೃಷ್ಣ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ.
ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಬಳಿಕ ಚುನಾವಣೆಗೆ ಮುನ್ನ ಭರವಸೆ ನೀಡಿದ್ದಂತೆ ಮಹಿಳೆಯರಿಗೆ ಉಚಿತ ಸಾರಿಗೆ, ಮಹಿಳೆಯರಿಗೆ ಮಾಸಾಶನ, ಉಚಿತ 200 ಯೂನಿಟ್ ವಿದ್ಯುತ್, ಉಚಿತ 10 ಕೆಜಿ ಅಕ್ಕಿ ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗಳನ್ನು ಜಾರಿಗೊಳಿಸಿತ್ತು.