ಮೈಸೂರು, : ಮಂಡ್ಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದ ಕೇಸ್ ಹಿನ್ನೆಲೆ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ಹಾರಾಡುತ್ತಿರುವುದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡುವ ಮೂಲಕ ಪ್ರಶ್ನಿಸಿದ್ದರು. ಇದೀಗ ಸಂಸದ ಪ್ರತಾಪ್ ಸಿಂಹ(Pratap Simha)ಕೂಡ ಸಾಮಾಜಿಕ ಜಾಲತಾಣದ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ಗೆ ಟಾಂಗ್ ನೀಡಿದ್ದಾರೆ. ಮೈಸೂರಿನ ಕೈಲಾಸಪುರಂನ ಪಾರ್ಕ್ನಲ್ಲಿ ಟಿಪ್ಪು ಬಾವುಟ ಹಾಕಿದ್ದಾರಲ್ಲ, ಒಪ್ಪಿಗೆ ಪಡೆದಿದ್ದಾರಾ? ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ಗೆ? ಪ್ರಶ್ನೆ ಮಾಡಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಮೈಸೂರಿನ ಕೈಲಾಸಪುರಂನ ಮೊಟ್ಟೆಕೇರಿ ಶ್ರೀನಿವಾಸ ಟೆಂಪಲ್ ರೋಡ್ನಲ್ಲಿರುವ ಅಂಬೇಡ್ಕರ್ ಪಾರ್ಕ್ನಲ್ಲಿ ಟಿಪ್ಪು ಭಾವುಟ ಹಾಕಿದ್ದಾರಲ್ಲಾ ಅವರು ಯಾರ ಅನುಮತಿ ಪಡೆದಿದ್ದಾರೆ ಸಿದ್ದರಾಮಯ್ಯನವರೇ, ಪರಮೇಶ್ವರರೇ? ಎಂದು ಕಿಡಿಕಾರಿದ್ದಾರೆ.
ಸಂಸದ ಪ್ರತಾಪ್ ಸಿಂಹ ಟ್ವೀಟ್
ಸದ್ಯ ಕೇಸರಿ ಧ್ವಜ, ಹಸಿರು ಧ್ವಜ ವಿವಾದ ಬೆಂಗಳೂರಿಗೂ ಹಬ್ಬಿದೆ. ಶಿವಾಜಿನಗರದ ಚಾಂದಿನಿ ಚೌಕ್ನ ಬಿಬಿಎಂಪಿ ಧ್ವಜಸ್ತಂಭದಲ್ಲಿ ಹಸಿರು ಧ್ವಜ ಹಾರಾಡುವುದನ್ನು ಹಿಂದೂ ಕಾರ್ಯಕರ್ತರು ಟ್ವೀಟ್ ಮಾಡಿ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶಿವಾಜಿ ನಗರ ಪೊಲೀಸರು ಹಸಿರುವ ಬಾವುಟವನ್ನು ತೆರವುಗೊಳಿಸಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
Laxmi News 24×7