ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ,

Spread the love

ಬೆಂಗಳೂರು, ಜನವರಿ : ಕೇಂದ್ರ ಸರ್ಕಾರ ನಿಷೇಧಿಸಿರುವ, ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟ್ (E-cigarette) ಅನ್ನು ಸಿಸಿಬಿ (CCB Police) ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಇ-ಸಿಗರೇಟ್​ಗಳನ್ನು ದುಬೈಯಿಂದ ಬೆಂಗಳೂರಿಗೆ ತರಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಒಂದು ಸಿಗರೇಟ್​​ಗೆ ಐದರಿಂದ ಆರು ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು.

ಕೊರಿಯರ್ ಮೂಲಕ ಬರುತ್ತಿತ್ತು ಇ-ಸಿಗರೇಟ್

ಇ-ಸಿಗರೇಟ್ ಅನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈಯಿಂದ ದೆಹಲಿಗೆ ತೆರಿಸಿ ಅಲ್ಲಿಂದ ಬೆಂಗಳೂರಿಗೆ ತರಿಸಲಾಗಿತ್ತು. ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ ಮೂಲದ ಶೋಹೇಬ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಹಲವಾರು ಸ್ಮೋಕಿ ಜೋಜ್ ಹಾಗೂ ರೀಟೆಲ್ ಮಾರಾಟ ಮಾಡುವವರಿಗೆ ಇ-ಸಿಗರೇಟ್​​ ಅನ್ನು ನೀಡುತ್ತಿದ್ದ. ಅನ್​ಲೈನ್ ಮೂಲಕ ಆರ್ಡರ್ ಮಾಡಿಸಿಕೊಂಡು ಪೋರ್ಟರ್ ಮತ್ತು ಡ್ನಜೋ ಮೂಲಕ ಪೂರೈಕೆ ಮಾಡುತ್ತಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಸಿಬಿ ಪೊಲೀಸರು ಅರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 


Spread the love

About Laxminews 24x7

Check Also

ಕುರ್ಚಿಗಿಂತ ಮೀಸಲಾತಿಗೇ ಆದ್ಯತೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

Spread the love Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ