Breaking News

ಆಯಾ ವರ್ಷವೇ ಪ್ರಶಸ್ತಿ ನೀಡಿ ಗೌರವಿಸಬೇಕು- ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು, ಜ.31: ಪ್ರಶಸ್ತಿ ನೀಡಿಕೆ ಮುಂದೂಡಬಾರದು, ಆಯಾ ವರ್ಷವೇ ನೀಡಿ ಗೌರವಿಸಬೇಕು ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿ

ಪ್ರದಾನಸಮಾರಂಭದಲ್ಲಿಮಾತನಾಡಿದ ಅವರು ‘ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ ನಾವು ಮೂಗು ತೀರಿಸುವುದಿಲ್ಲ. ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ ಎಂದರು.

 

4 ವರ್ಷಗಳ ಬಳಿಕ ಕನ್ನಡ ಸಂಸ್ಕೃತಿ ಇಲಾಖೆಯು ತನ್ನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಿದ್ದು, ಅದರಲ್ಲಿ 21 ವಿಭಾಗಗಳಲ್ಲಿ ಸಾಧಕರ ಪಟ್ಟಿ ಬಿಡುಗಡೆಗೊಳಿಸಿತ್ತು. ನಾ ಡಿಸೋಜಾ, ಆನಂದ ತೆಲ್ತುಂಬಡೆ, ಧಾರವಾಡದ ಡಾ. ಎನ್.ಜಿ. ಮಹದೇವಪ್ಪ ಸೇರಿ 75 ಸಾಧನಕರು ಆಯ್ಕೆಯಾಗಿದ್ದಾರೆ.

 

ಜೊತೆಗೆ ಈ ಹಿಂದೆ ಘೋಷಣೆ ಮಾಡಲಾಗಿದ್ದ, 2018-19, 2020-21, 2021-22 ಹಾಗೂ 2022-23ನೇ ಸಾಲಿನ ಪ್ರಶಸ್ತಿಗಳು ನಾನಾ ಕಾರಣಗಳಿಗಾಗಿ ವಿತರಣೆ ಆಗಿರಲಿಲ್ಲ. ವಿತರಣೆ ಆಗದೇ ಇರುವ 31 ಪ್ರಶಸ್ತಿಗಳು ಸೇರಿದಂತೆ ಒಟ್ಟು 75 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕ್ ಕದನ: 9 ಮಂದಿ ಅವಿರೋಧ ಆಯ್ಕೆ, 7 ಕ್ಷೇತ್ರಗಳಲ್ಲಿ ಚುನಾವಣೆ!

Spread the loveಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಈ ವೇಳೆ ಕೆಲವರು ನಾಮಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ