Breaking News

ಬೆಂಗಳೂರು ವಿವಿ ಕ್ಯಾಂಪಸ್​ ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ ಪ್ರಕರಣ: ಅಡುಗೆ ಪಾಲಕ ಸಸ್ಪೆಂಡ್

Spread the love

ಬೆಂಗಳೂರು, : ಬೆಂಗಳೂರು ವಿವಿ ಕ್ಯಾಂಪಸ್​(Bengaluru VV campus)ನ ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡುಗೆ ನಿಲಯದ​ ಮಂಜುನಾಥ್​ನನ್ನು ಅಮಾನತು ಮಾಡಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ. ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆಯಾದ ಬಗ್ಗೆ ನಿನ್ನೆ ಟಿವಿ9 ಸುದ್ದಿ ಬಿತ್ತರಿಸಿತ್ತು. ಕಳಪೆ ಆಹಾರ ಸೇವಿಸಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಇಂದು ಹಾಸ್ಟೆಲ್​ಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ತನಿಖೆಯಲ್ಲಿ ಮಂಜುನಾಥ್ ಕರ್ತವ್ಯ ನಿರ್ಲಕ್ಷ್ಯ ಕಂಡು ಬಂದ ಹಿನ್ನೆಲೆ ತಕ್ಷಣ ಸೇವೆಯಿಂದ ಅಮಾನತು ಮಾಡಲಾಗಿದೆ.

ಜ್ಞಾನಭಾರತಿ ಕ್ಯಾಂಪಸ್ ಆವರಣದಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಾಲಕರ ಹಾಸ್ಟೆಲ್​​ನಲ್ಲಿ ಮೂರನೇ ಬಾರಿಗೆ, ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ಯೂನಿರ್ವಸಿಟಿ ಕ್ಯಾಂಪಸ್​ ಮಾತ್ರವಲ್ಲ, ಬನಶಂಕರಿಯ ಬಿಸಿಎಂ ಹಾಸ್ಟಲ್​​ ಊಟದಲ್ಲಿಯೂ ಜಿರಳೆ ಪತ್ತೆಯಾಗಿದೆ. ಇದ್ರಿಂದಾಗಿ ಅಡುಗೆ ಮನೆ ಬಂದ್ ಮಾಡಿ ಸ್ಟುಡೆಂಟ್ಸ್ ಆಕ್ರೋಶ ಹೊರ ಹಾಕಿದ್ದರು.

 

ಅವ್ಯವಸ್ಥೆ ವಿರುದ್ಧ ಸಿಡಿದೆದ್ದಿರುವ ಸ್ಟೂಡೆಂಟ್ಸ್ ಕಟ್ಟುಪಾಡು ಬದಲಾಗದು ಎಂಬ ಶೀರ್ಷಿಕೆಯಡಿ ಕವನ ಬರೆದಿದ್ದರು. ಬದಲಿಸಲು ಮುಂದೆ ಬಂದರೆ ಎತ್ತಂಗಡಿ ಕಟ್ಟಿಟ್ಟ ಬುತ್ತಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದೇ ಹಾಸ್ಟೆಲ್​ನಲ್ಲಿ 2023ರ ನವೆಂಬರ್ ತಿಂಗಳಲ್ಲಿ ಊಟದಲ್ಲಿ ಹುಳಗಳು ಪತ್ತೆಯಾಗಿದ್ದವು. ಕಳಪೆ ಆಹಾರ ನೀಡುತ್ತಿರುವುದರಿಂದ ಕೆರಳಿದ ವಿದ್ಯಾರ್ಥಿಗಳು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದರು. ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ. ಊಟ, ನೀರು ಸರಿಯಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.

ಏನೇ ಹೇಳಿ, ಕಾಲೇಜ್ ಹಾಸ್ಟೆಲ್​ನಲ್ಲಿ ಒಂದಿಲ್ಲೊಂದು ಅದ್ವಾನ ಬಯಲಾಗುತ್ತಾನೆ ಇದೆ. ಅಧಿಕಾರಿಗಳು ಇನ್ನಾದರೂ ಗುಣಮಟ್ಟದ ಆಹಾರ ನೀಡುವತ್ತ ಗಮನ ಹರಿಸಬೇಕಿದೆ ಎಂದು ವಿನಯಕುಮಾರ್ ಕಾಶಪ್ಪನವರ್​ ಹೇಳಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ