Breaking News
Home / ರಾಜಕೀಯ / ಬೆಂಗಳೂರು ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ನೇಮಕ

ಬೆಂಗಳೂರು ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ನೇಮಕ

Spread the love

ಬೆಂಗಳೂರು,: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ (Bengaluru Jayadeva Hospital) ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ (Dr Ravindranath) ಅವರನ್ನು ನೇಮಕ ಮಾಡಲಾಗಿದೆ.

ಡಾ.ಸಿ.ಎನ್.ಮಂಜುನಾಥ ಅವರ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

69 ವಯಸ್ಸಿನ ರವೀಂದ್ರನಾಥ್ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್‌.ಮಂಜುನಾಥ್‌ ಅವರ ಅವಧಿ ಇಂದಿಗೆ (ಜನವರಿ 31) ಮುಕ್ತಾಯವಾಗಿದೆ. ಈಗಾಗಲೇ ಡಾ.ಮಂಜುನಾಥ್‌ ಅವರ ಸೇವಾವಧಿಯನ್ನು ನಾಲ್ಕು ಬಾರಿ ವಿಸ್ತರಿಸಲಾಗಿದ್ದು, ಈ ಬಾರಿ ಹೊಸ ನಿರ್ದೇಶಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಜಯದೇವ ಆಸ್ಪತ್ರೆಗೆ ಪೂರ್ಣವಧಿ ನಿರ್ದೇಶರನ್ನು ನೇಮಕ ಮಾಡುವ ಮುನ್ನ ರಾಜ್ಯ ಸರ್ಕಾರ ಸದ್ಯಕ್ಕೆ ಡಾ.ರವೀಂದ್ರನಾಥ್ ಅವರನ್ನು ಪ್ರಬಾರ ನಿರ್ದೇಶಕರನ್ನಾಗಿ ನೇಮಕ ಮಾಡಿದೆ.

ಜಯದೇವ ಆಸ್ಪತ್ರೆಗೆ ಪ್ರಭಾರ ನಿರ್ದೇಶಕ ಸ್ಥಾನಕ್ಕೆ ಒಟ್ಟು 21 ಅರ್ಜಿಗಳು ಬಂದಿದ್ದವು. ಈ ಪೈಕಿ ಜಯದೇವ ಆಸ್ಪತ್ರೆಯಲ್ಲಿಯೇ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಚ್.ಶ್ರೀನಿವಾಸ್‌ ಹಾಗೂ ಮೈಸೂರು ಜಯದೇವ ಕೇಂದ್ರದ ನಿರ್ದೇಶಕ ಡಾ.ಕೆ.ಎಸ್.ಸದಾನಂದ, ಡಾ.ದಿನೇಶ್‌ ಸಹಿತ ಹಲವರ ಹೆಸರುಗಳು ನಿರ್ದೇಶಕ ಹುದ್ದೆ ರೇಸ್​​ನಲ್ಲಿದ್ದವು.

ರಾಜ್ಯದಲ್ಲಿ ನಿಗಮ ಮಂಡಳಿಗಳು ಹಾಗೂ ಸರ್ಕಾರಿ ಸಂಸ್ಥೆಗಳ ಮುಖ್ಯಸ್ಥರ ನೇಮಕದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಗುತ್ತದೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಸಲಾಗುವ ಜಯದೇವ ಹೃದ್ರೋಗ ಸಂಸ್ಥೆಯ ಬೋರ್ಡ್‌ ಮೀಟಿಂಗ್‌ನಲ್ಲಿ ಅಧಿಕೃತವಾಗಿ ನಿರ್ದೇಶಕರನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ ಬೋರ್ಡ್‌ ಮೀಟಿಂಗ್ ನಡೆದು, ಶಾಶ್ವತ ನಿರ್ದೇಶಕರ ಆಯ್ಕೆಯವರೆಗೆ ಜಯದೇವ ಆಸ್ಪತ್ರೆಗೆ ಡಾ. ರವೀಂದ್ರನಾಥ್ ಅವರು ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.


Spread the love

About Laxminews 24x7

Check Also

ಭುವಿಯಲ್ಲಿ ಮಳೆ ಎಳೆದ ಹಸಿರು ತೇರು…

Spread the love ಕಿತ್ತೂರು: ಮೇ ಕೊನೆಯ ಮತ್ತು ಜೂನ್ ಮೊದಲ ವಾರದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಶೇ 90ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ