Breaking News

2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ

Spread the love

ಬೆಂಗಳೂರು, : 2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ ಹಿನ್ನೆಲೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ರಾಜ್ಯ ಯುವ ಜನತಾ ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(nikhil kumaraswamy)ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮತ್ತಿತರರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ, ಗ್ಯಾರಂಟಿ ಕಾರ್ಡ್ ನೀಡಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಕರ್ನಾಟಕ ಮಾಡಲ್ ಇನ್ನು ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸಿಜೆ ದಿನೇಶ್ ಕುಮಾರ್, ನ್ಯಾ.ಶಿವಶಂಕರೇಗೌಡ ಅವರಿದ್ದ ಪೀಠ ನೋಟಿಸ್ ನೀಡಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ