Breaking News

ಫೆ.5ರಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ

Spread the love

ಬೆಳಗಾವಿ: ಸರ್ಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ಸಮಾವೇಶವನ್ನು ಫೆ.5 ರಂದು ನಗರದ ಸರ್ದಾರ್‌ ಪ್ರೌಢಶಾಲೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಬೆಳಗಾವಿ: ಫೆ.5ರಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ

 

ನಗರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಸಮಾವೇಶ ನಡೆಸಲಾಗುವುದು. ಫಲಾನುಭವಿಗಳನ್ನು ಗುರುತಿಸಿ ಆಹ್ವಾನಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

 

ಬೆಳಗಾವಿ: ಫೆ.5ರಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ

ಪೊಲೀಸ್‌ ಅಧಿಕಾರಿಗಳು ಸಂಚಾರ ದಟ್ಟಣೆ ನಿಯಂತ್ರಣ, ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಆಂಬುಲೆನ್ಸ್‌ ಹಾಗೂ ವೈದ್ಯಕೀಯ ತಂಡಗಳನ್ನು ನಿಯೋಜಿಸಬೇಕು ಎಂದರು.

ಶಾಸಕ ಆಸಿಫ್ ಸೇಠ್ ಮಾತನಾಡಿ, ಈ ಯೋಜನೆಗಳಿಗೆ ಪ್ರತಿವರ್ಷ ಸರ್ಕಾರದಿಂದ ₹ 60 ಸಾವಿರ ಕೋಟಿ ಖರ್ಚು ಮಾಡಲು ಉದ್ದೇಶಿಸಲಾಗಿದೆ. ಇನ್ನಷ್ಟು ಅರಿವು ಮೂಡಿಸುವ ಕಾರಣಕ್ಕೆ ಸಮಾವೇಶ ಆಯೋಜಿಸಲಾಗುತ್ತಿದೆ ಎಂದರು.


Spread the love

About Laxminews 24x7

Check Also

ಅಪ್ರಾಪ್ತೆ ಮೇಲೆ ಅತ್ಯಾಚಾರ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

Spread the loveಬೈಲಹೊಂಗಲ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಗೋಕಾಕ ತಾಲೂಕಿನ ಹೀರೆಹಟ್ಟಿ ಗ್ರಾಮದ ಅಪರಾಧಿ ಲಕ್ಷ್ಮಣ ಹನುಮಂತ ಮುರಗೋಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ