ಹುಬ್ಬಳ್ಳಿ : ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಿಜೆಪಿಗೆ (BJP) ಬರುತ್ತಾರೆ ಎನ್ನುವ ಬಗ್ಗೆ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸದನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು 2024ರ ಲೋಕಸಭೆಯ ಚುನಾವಣೆಯ ವೇಳೆಯೂ ಬಿಜೆಪಿಯವರೇ (BJP) ಎಂದು ಹೇಳಿದ್ದಾರೆ.
ಇದನ್ನು ನೋಡಿದರೇ ಖರ್ಗೆ ಅವರೇ ಬಿಜೆಪಿಗೆ ಬರುತ್ತಾರೆ ಎನ್ನುವ ಅನುಮಾನ ಬರುತ್ತಿದೆ ಎಂಬ ಅನುಮಾನ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.
ಕೇಂದ್ರದಲ್ಲಿ ಏಂದಿಗೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ನಿರ್ಧಾರ ಮಾಡಿದಂತೆ ಅನಿಸುತ್ತಿದೆ. ಆದರೂ ಕಾಂಗ್ರೆಸ್ ನಾಯಕರೊಬ್ಬರು ದೇಶ ಇಬ್ಭಾಗವಾಗಿಸುವ ಬಗ್ಗೆ ಮಾತನಾಡುತ್ತಾರೆ. ದೇಶ ಇಬ್ಭಾಗಿಸಲು ಇದೇನೂ ಅವರಪ್ಪನ ಮನೆಯ ಆಸ್ತಿಯಾ? ಅಕಸ್ಮಾತ್ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶ ಒಂದಿರಬೇಕೋ ಬೇಡ್ವೋ. ಕಾಂಗ್ರೆಸ್ (Congress) ಪಕ್ಷಕ್ಕೆ ದೇಶ ಅಂದ್ರೆ ಭೂಮಿ ಮಾತ್ರ ಆದರೆ ಬಿಜೆಪಿಯ ಕಾರ್ಯಕರ್ತರಿಗೆ ದೇಶ ಅಂದರೆ ಮಾತೃಭೂಮಿ ಎಂದು ಪರೋಕ್ಷವಾಗಿ ಡಿಕೆ ಸುರೇಶ್ ವಿರುದ್ಧ ಕಿಡಿಕಾರಿದರು.