ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನ ಐಐಎಂನಲ್ಲಿ ಫೆಬ್ರವರಿ 9ರಂದು ಶಾಸಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.
ಖಾದರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 12ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದು, ಫೆ. 16ರಂದು ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದ್ದಾರೆ.
Laxmi News 24×7