Home / ರಾಜಕೀಯ / ಸಿಕ್ಕಿಂನಲ್ಲಿ ಗದಗ ಮೂಲದ ಯೋಧ ಹುತಾತ್ಮ

ಸಿಕ್ಕಿಂನಲ್ಲಿ ಗದಗ ಮೂಲದ ಯೋಧ ಹುತಾತ್ಮ

Spread the love

ದಗ: ಕರ್ತವ್ಯನಿರತ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ನಡೆದಿದೆ.

ಹುತಾತ್ಮ ಯೋಧರನ್ನು ಗದಗ ಜಿಲ್ಲೆ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದ ರಾಮನಗೌಡ ಕರಬಸನಗೌಡ್ರ (44) ಎಂದು ಗುರುತಿಸಲಾಗಿದೆ.

ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತ ಆಗಿದೆ. ರಕ್ತದೊತ್ತಡದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಫೆ.7ರಂದು ಹುತಾತ್ಮ ಯೋಧನ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಆಗಮಿಸಲಿದೆ ಎಂದು ತಿಳಿದುಬಂದಿದೆ


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ