Breaking News

ಇಂದಿನಿಂದ 29 ರೂ.ನ ‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟ

Spread the love

ಬೆಂಗಳೂರು : ಜನಸಾಮಾನ್ಯರಿಗೆ ಗುಡ್ ನ್ಯೂಸ್ ಎಂಬಂತೆ ಇಂದಿನಿಂದ 29 ರೂ.ನ ‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟವಾಗುತ್ತಿದೆ.

ಹೌದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ.

 

ನಾಫೆಡ್-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್ನ 7 ಸಂಚಾರಿ ವಾಹನಗಳಲ್ಲಿ ಭಾರತ್ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿ 29 ರೂ.ಗೆ ಲಭ್ಯವಾಗಲಿದೆ.

ಬಿಗ್ ಬಾಸ್ಕೆಟ್, ಪ್ಲಿಪ್ಕಾರ್ಟ್, ರಿಲೈಯನ್ಸ್ ಸ್ಟೋರ್ಸ್, ಸ್ಟಾರ್ ಹೈಪರ್ ಬಝಾರ್ಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆಯಿಂದ ರಿಲೈಯನ್ಸ್ ಸ್ಟೋರ್ಸ್ಗಳಲ್ಲಿ ಈ ಅಕ್ಕಿ ಸಿಗಲಿದೆ. ಇನ್ನೊಂದು ವಾರದ ಬಳಿಕ ಇತರೆ ಸ್ಟೋರ್ಸ್ಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದು.

ನಾಳೆ ಮಂಡ್ಯ, ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲೂ ಇದು ಆರಂಭವಾಗಲಿದೆ. ಮುಂದಿನ ವಾರದಿಂದ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ್ ರೈಸ್’ ಅನ್ನು ಪ್ರತಿ ಕೆ.ಜಿ.ಗೆ 29 ರೂ.ಗೆ ಮಾರಾಟ ಮಾಡುವುದಾಗಿ ಕೇಂದ್ರ ಸರ್ಕಾರ ಕಳೆದ ಶುಕ್ರವಾರ ಪ್ರಕಟಿಸಿತ್ತು, ಅಂತೆಯೇ ಇಂದಿನಿಂದ ಜನರಿಗೆ ಭಾರತ್ ರೈಸ್ ಸಿಗಲಿದೆ.


Spread the love

About Laxminews 24x7

Check Also

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

Spread the loveತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ