ಬೆಂಗಳೂರು : ರಾಜ್ಯದ 8 ನೇ ತರಗತಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಈ ಸೈಕಲ್ ಯೋಜನೆಯನ್ನು ಮತ್ತೆ ಸರ್ಕಾರ ಮರುಪರಿಚಯಿಸುವ ಸಾಧ್ಯತೆಯಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಿಎಂ ಸಿದ್ದರಾಮಯ್ಯರಿಗೆ ಪ್ರಸ್ತಾವನೆ ಸಲ್ಲಿಸಿದ್ದು, 2020-21ನೇ ಶೈಕ್ಷಣಿಕ ವರ್ಷದಿಂದ ಸ್ಥಗಿತಗೊಂಡಿರುವ ಉಚಿತ ಬೈಸಿಕಲ್ ಯೋಜನೆಯನ್ನು ಮರು ಪರಿಚಯಿಸಲು ಅನುಮೋದನೆ ನೀಡುವಂತೆ ಮನವಿ ಮಾಡಿದೆ.
ಹೊಸ ಪ್ರಸ್ತಾವನೆಗಳನ್ನು ಸಲ್ಲಿಸದಂತೆ ಪೂರ್ವ ಸೂಚನೆ ಇದ್ದ ಕಾರಣ, ಪ್ರಮುಖ ಘೋಷಣೆಯಾಗಿ ಉಚಿತ ಬೈಸಿಕಲ್ ಯೋಜನೆಯನ್ನು ಮರು ಪರಿಚಯಿಸಲು ಮನವಿ ಮಾಡಲು ನಿರ್ಧರಿಸಿದ್ದೇವೆ ಎಂದು ಇಲಾಖೆಯ ಅಧಿಕೃತ ಮೂಲಗಳು ತಿಳಿಸಿವೆ.
ಬಿ ಎಸ್ ಯಡಿಯೂರಪ್ಪ ಅವರು 2006-07ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಉಚಿತ ಬೈಸಿಕಲ್ ಯೋಜನೆಯನ್ನು ಪ್ರಾರಂಭಿಸಿದ್ದರು.ಫೆ.16 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದು, ಬಜೆಟ್ ನಲ್ಲಿ ಯೋಜನೆ ಮರುಜಾರಿ ಬಗ್ಗೆ ಘೋಷಣೆಯಾಗುವ ಸಾಧ್ಯತೆಯಿದೆ.