Breaking News

‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಶೇ. 50 ಮಿತಿ ರದ್ದು: ರಾಹುಲ್ ಗಾಂಧಿ ಘೋಷಣೆ

Spread the love

ರಾಂಚಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯಗಳಿಸಿದಲ್ಲಿ ಈಗ ಮೀಸಲಾತಿಗೆ ಇರುವ ಗರಿಷ್ಠ ಶೇಕಡ 50ರಷ್ಟು ಮಿತಿಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಜಾರ್ಖಂಡ್ ರಾಜ್ಯದಲ್ಲಿ ಭಾರತ್ ಚೋಡೋ ನ್ಯಾಯ ಯಾತ್ರೆ ಅಂಗವಾಗಿ ರಾಂಚಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ ಜಯಗಳಿಸಿದಲ್ಲಿ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

ಮೀಸಲಾತಿಗೆ ಶೇಕಡ 50ರಷ್ಟು ಗರಿಷ್ಠ ಮಿತಿಯನ್ನು ಇಂಡಿಯಾ ಒಕ್ಕೂಟ ಕಿತ್ತೊಗೆಯಲಿದೆ. ದಲಿತರು, ಆದಿವಾಸಿಗಳ ಮೀಸಲಾತಿಯಲ್ಲಿ ಕಡಿಮೆ ಮಾಡುವುದಿಲ್ಲ. ಸಮಾಜದ ಹಿಂದುಳಿದ ವರ್ಗಗಳು ತಮ್ಮ ಹಕ್ಕು ಪಡೆಯುತ್ತವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ