Breaking News

ಧಾರವಾಡದಲ್ಲಿ ಸನಾತನವಾದಿಗಳ ವಿರುದ್ಧ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಆಕ್ರೋಶ

Spread the love

ಧಾರವಾಡ, : ಸನಾತನವಾದಿಗಳ ವಿರುದ್ಧ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ (Sanehalli panditaradhya shivacharya swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ.ಧಾರವಾಡ(Dharwad) ದಲ್ಲಿ ಸಂಶೋಧಕ ಡಾ.ಕಲಬುರ್ಗಿ ಹತ್ಯೆ ಪ್ರಸ್ತಾಪಿಸಿ ಮಾತನಾಡಿದ ಅವರು ‘ ಡಾ.ಎಂ.ಎಂ.ಕಲಬುರ್ಗಿಯನ್ನು ನಾವು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇವೆ. ಅಂತಹ ಅಪರೂಪದ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಸನಾತನವಾದಿಗಳು ಮೊದಲಿನಿಂದಲೂ ಇಂತಹ ಕಿರುಕುಳ ಕೊಡುತ್ತಿದ್ದಾರೆ. ಅದು 12ನೇ ಶತಮಾನದಲ್ಲೂ ಸತ್ಯ, 21ನೇ ಶತಮಾನದಲ್ಲೂ ಸತ್ಯ ಎಂದು ಕಿಡಿಕಾರಿದರು.

ಅವರು ವ್ಯಕ್ತಿಯನ್ನು ಕೊಲ್ಲಬಹುದು, ವ್ಯಕ್ತಿಯ ವಿಚಾರವನ್ನು ಎಂದಿಗೂ ಕೊಲ್ಲಲು ಸಾಧ್ಯವಿಲ್ಲ. ಕಲಬುರ್ಗಿ ಎಂಬ ವ್ಯಕ್ತಿ ಹೋಗಿರಬಹುದು. ಆದರೆ, ಅವರ ವಿಚಾರಗಳನ್ನು ಪ್ರಖರತೆ ಪಡೆದುಕೊಳ್ಳುತ್ತಿವೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯಶ್ರೀ ಹೇಳಿದರು.

ಇತ್ತೀಚೆಗೆ ಗಣಪತಿ ಪೂಜೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಇದರ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿತ್ತು. ಇಷ್ಟೇಲ್ಲ ಆದ ಬಳಿಕ ಪ್ರತಿಕ್ರಿಯಿಸಿದ್ದ ಅವರು ‘ಗಣಪತಿ ನಮ್ಮ ಸಂಸ್ಕೃತಿ ಅಲ್ಲ ಎಂದು ಪುನರುಚ್ಚರಿಸಿದ್ದರು. ಜೊತೆಗೆ ಟೀಕೆ ಮಾಡಿದವರ ವಿರುದ್ಧ ಗುಡುಗಿದ್ದರು


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ