ಬೆಳಗಾವಿ, : ರಾಜ್ಯ ಸರ್ಕಾರದ (Karnataka Congress Government) ವಿರುದ್ಧ ಬಿಜೆಪಿ (BJP) ಕಾರ್ಯಕರ್ತರು ರಾಜ್ಯಾದ್ಯಾಂತ ಪ್ರತಿಭಟನೆ ನಡೆಸಿದ್ದು, ಬೆಳಗಾವಿಯಲ್ಲಿ (Belagavi)ಕಾಂಗ್ರೆಸ್ ಕಚೇರಿಯೊಳಗೆ (Congress Office) ನುಗ್ಗಿದರು. ಸಂಸದ ಡಿಕೆ ಸುರೇಶ್ (DK Suresh) ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಕೊನೆಗೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಚೇರಿಯಿಂದ ಎಳೆದು ಹೊರ ತಂದರು.
ಬಳಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನಾ ಸ್ಥಳಕ್ಕೆ ಬಂದ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಆಗಮಿಸಿದ್ದು, ಬಿಜೆಪಿಗರ ಎದುರೇ ಪ್ರಧಾನಿ ಮೋದಿಗೆ ಧಿಕ್ಕಾರ ಎಂದು ಕೂಗಿದರು. ಕೊನೆಗೆ ಪೊಲೀಸರು 30ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು.
ಬಿಜೆಪಿ ಕಾರ್ಯಕರ್ತರು ಎಮ್ಮೆ, ಹಾಲಿನ ಕ್ಯಾನ್ ಹಿಡಿದುಕೊಂಡು ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನಾ ಱಲಿ ನಡೆಸಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಱಲಿ ನಡೆಯಿತು. ರಾಜ್ಯ ಸರ್ಕಾರ ಹಾಲು ಉತ್ಪಾದಕರ ಪ್ರೋತ್ಸಾಹ ಧನ ನೀಡುತ್ತಿಲ್ಲ. ಹಾಲು ಉತ್ಪಾದಕರ ಪ್ರೋತ್ಸಾಹ ಧನ ನೀಡುತ್ತಿಲ್ಲ, ಕಳೆದ 10 ತಿಂಗಳಲ್ಲಿ 716ಕೋಟಿ ರೂ ಬಾಕಿ ಉಳಿಸಿಕೊಂಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಕತ್ತರಿ ಹಾಕಲಾಗಿದೆ. ರಾಜ್ಯ ಸರ್ಕಾರ ಕೊಡುತ್ತಿದ್ದ ನಾಲ್ಕು ಸಾವಿರ ರೂಪಾಯಿಗೂ ಕತ್ತರಿ ಹಾಕಲಾಗಿದೆ. ಶೀಘ್ರವೇ 4 ಸಾವಿರ ರೂ. ಅನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಇಲ್ಲದಿದ್ದರೆ ರಾಜ್ಯಾದ್ಯಂತ ಜಾನುವಾರು ಸಮೇತ ಧರಣಿ ನಡೆಸುವಂತೆ ಎಚ್ಚರಿಕೆ ನೀಡಿದರು.