ಮಂಗಳೂರು, : ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿತ್ತಿದೆ ಅಂತಾ ಕಾಂಗ್ರೆಸ್ ಆರೋಪಿಸಿದೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತಿಕ್ಕಾಟಕ್ಕೂ ಕಾರಣವಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ(Harish Poonja)ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂದು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. “ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು”. “ಹಿಂದೂಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ”. ದೇಶದಲ್ಲಿರುವ ತೆರಿಗೆ ಸಂಗ್ರಹದಲ್ಲಿ ಹಿಂದೂಗಳ ಪಾಲು ಎಷ್ಟು. ಇದರಲ್ಲಿ ಹಿಂದೂಗಳ ಅಭಿವೃದ್ಧಿಗೆ ಉಪಯೋಗವಾಗುತ್ತಿರುವುದು ಎಷ್ಟು ಎಂದು ಪ್ರಶ್ನಿಸಿದ್ದಾರೆ.
ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕೆಂದು ಶಾಸಕ ಹರೀಶ್ ಪೂಂಜಾ ಒತ್ತಾಯಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಚರ್ಚೆ ಶುರುವಾಗಿದೆ.
ರಾಜ್ಯಕ್ಕೆ ಬರುವ ತೆರಿಗೆ ಹಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ
ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕವೇ ಎರಡನೇ ಸ್ಥಾನದಲ್ಲಿದೆ. ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ಹಣ ಹೋಗುತ್ತೆ. ಆದರೆ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇಕಡಾ 1.07ರಷ್ಟು ಕಡಿಮೆ ಆಗಿದೆ. ಅಂದರೆ ರಾಜ್ಯಕ್ಕೆ ಬರುವ ತೆರಿಗೆ ಹಣದಲ್ಲಿ ಸುಮಾರು 62 ಸಾವಿರದ 98 ಕೋಟಿ ರೂ. ಹಣ ಕಡಿಮೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಆರೋಪಿಸಿದ್ದರು.
ಶಾಸಕ ಹರೀಶ್ ಪೂಂಜಾ ಪೋಸ್ಟ್14 ನೇ ಹಣಕಾಸು ಆಯೋಗದಿಂದ 15 ನೇ ಹಣಕಾಸು ಆಯೋಗಕ್ಕೆ ಬರುವಾಗ ತೆರಿಗೆ ಕಡಿಮೆ ಆಗಿದ್ದನ್ನ ಗಮನಿಸಿ, ಹಣಕಾಸು ಆಯೋಗವೇ 5,495 ಕೋಟಿ ರೂ. ವಿಶೇಷ ಅನುದಾನಕ್ಕೆ ಶಿಫಾರಸ್ಸು ಮಾಡಿತ್ತು. ಆದರೆ ನಮ್ಮ ರಾಜ್ಯದಿಂದಲೇ ಆಯ್ಕೆ ಆಗಿ ಹೋಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಅನುದಾನಕ್ಕೆ ತಡೆ ಹಾಕಿದ್ದರು ಎಂದು ಕಿಡಿಕಾರಿದ್ದರು.