Breaking News

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಭಾರಿ ಪ್ಲಾನ್

Spread the love

ಉತ್ತರ ಕನ್ನಡ, :ಲೋಕಸಭೆ ಚುನಾವಣೆಗೆ (Lok Sabha Election) 2-3 ತಿಂಗಳು ಬಾಕಿ ಉಳಿದಿವೆ. ಈಗಾಗಲೆ ರಾಜ್ಯದಲ್ಲಿ ಟಿಕೆಟ್​ಗಾಗಿ ಲಾಭಿ ಜೋರಾಗಿಯೇ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ (Congress)​ ಘಟಕ ಹಾಲಿ ಶಾಸಕರು ಅಥವಾ ಸಚಿವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಮುಂದಾಗಿದೆ. ಜಾರಿಯಾಗಿರುವ ಐದು ಗ್ಯಾರೆಂಟಿ ಮತ್ತು ಸ್ಥಳೀಯ ನಾಯಕರ ಪ್ರಭಾವ ಎರಡನ್ನೂ ಒಟ್ಟುಗೂಡಿಸಿ ಚುನಾವಣೆಯನ್ನು ಎದುರಿಸಲು ಸಜ್ಜಾಗಿದೆ. ಇದಕ್ಕಾಗಿ ಎಲ್ಲ ಕ್ಷೇತ್ರಗಳಲ್ಲಿ ಪ್ರಬಲ ನಾಯಕರನ್ನೇ ಕಣಕ್ಕೆ ಇಳಿಸಲು ಕಾಂಗ್ರೆಸ್ ತಯಾರಿ ನಡೆಸಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಅದರಂತೆ ಇದೀಗ ಉತ್ತರ ಕನ್ನಡ (Uttar Kannada) ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಯಕನನ್ನು ಕಣಕ್ಕಿಳಿಸಲು ಕಾಂಗ್ರೆಸ್​ ಪ್ಲಾನ್ ಮಾಡಿದೆ.

ಹೌದು ಹಲಿಯಾಳ-ದಾಂಡೇಲಿ-ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಟಿಕೆಟ್​ ನೀಡಲು ಕಾಂಗ್ರೆಸ್​ ಯೋಚಿಸಿದೆ. ಇನ್ನು ಆರ್​ವಿ ದೇಶಪಾಂಡೆ ಅವರಿಗೆ ಟಿಕೆಟ್ ಕೊಡವ ವಿಚಾರವಾಗಿ ಕೈ ನಾಯಕರು ಸಾಕಷ್ಟು ಲೆಕ್ಕಾಚಾರ ಹಾಕಿದ್ದಾರೆ . ಉತ್ತರ ಕನ್ನಡ ಜಿಲ್ಲೆಯ ಪ್ರತಿ ಕ್ಷೇತ್ರದಲ್ಲೂ ಆರ್​ವಿ ದೇಶಪಾಂಡೆ ತನ್ನ ಹಿಡಿತವನ್ನು ಸಾಧಿಸಿದ್ದಾರೆ. ಅಲ್ಲದೆ ಒಂಬತ್ತು ಬಾರಿ ಹಲಿಯಾಳ-ದಾಂಡೇಲಿ-ಜೋಯಿಡಾ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.ಇನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವರಿ ಸಚಿವರಿದ್ದಾಗ ತಮ್ಮ ಕಾರ್ಯ ಶೈಲಿ ಮೂಲಕ ಅನೇಕ ಕಾಂಗ್ರೆಸ್​ ನಾಯಕರ ಮನಸ್ಸು ಗೆದ್ದಿದ್ದರು. ಆರ್​ವಿ ದೇಶಪಾಂಡೆ ಆರ್ಥಿಕವಾಗಿಯೂ ಬಲಿಷ್ಠರಾಗಿದ್ದಾರೆ. ಇವರು ಜಿಲ್ಲೆಯಲ್ಲಿ ತಮ್ಮದೆ ಆದ ಮತ ಬ್ಯಾಂಕ್ ಹೊಂದಿದ್ದಾರೆ. ಈಗಿನ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಟಕ್ಕರ್ ಕೊಡಬಹುದಾದ ನಾಯಕರಾಗಿದ್ದಾರೆ. ಹೀಗಾಗಿ ಆರ್​ವಿ ದೇಶಪಾಂಡೆ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್​ ಚಿಂತಿಸಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ