Breaking News

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the love

ಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು ತೂಗಿ ಲೋಕಸಭಾ ಟಿಕೆಟ್ ನೀಡಲು ಮುಂದಾಗಿದೆ. ಚಿಕ್ಕೋಡಿ ಕ್ಷೇತ್ರಕ್ಕೆ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ‌ ಹಾಘೂ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ ಅವರ ಹೆಸರುಗಳು ಕೇಳಿ ಬಂದಿವೆ. ಬಿಜೆಪಿ ಪಕ್ಷದತ್ತ ವಾಲುತ್ತಿರುವ ಸವದಿಯನ್ನ ಪಕ್ಷದಲೇ ಉಳಿಸಿಕೊಳ್ಳಲು ಪುತ್ರನಿಗೆ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಈಗಾಗಲೇ ಕಾಂಗ್ರೆಸ್‌ಗೆ ಟಾಟಾ ಮಾಡಿದ್ದಾರೆ. ಆದರೆ ಶೆಟ್ಟರ್ ಬಿಜೆಪಿ ಮರು ಸೇರ್ಪಡೆ ಬೆನ್ನಲ್ಲೇ ಬಿಜೆಪಿಯಿಂದ ಬಂದಿದ್ದ ಲಕ್ಷ್ಮಣ ಸವದಿ ಅವರು ಕೂಡ ಕಾಂಗ್ರೆಸ್‌ನಿಂದ ಮತ್ತೆ ಬಿಜೆಪಿಗೆ ವಾಪಸ್ ಹೋಗುತ್ತಾರೆ ಎಂಬ ವದಂತಿ ಹರಿದಾಡುತ್ತಿದೆ. ಹೀಗಾಗಿ ಲಕ್ಷ್ಮಣ ಸವದಿ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದ್ದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ‌ಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಅಲ್ಲದೆ ಲಕ್ಷ್ಮಣ ಸವದಿ ಪುತ್ರ ಸ್ಪರ್ಧೆ ಮಾಡಿದ್ರೇ ಸುಲಭವಾಗಿ ಚಿಕ್ಕೋಡಿ ಗೆಲ್ಲಬಹುದು. ಚಿಕ್ಕೋಡಿ ಲೋಕಸಭಾ ಕ್ಷೇತ್ರ ಸೇರಿದಂತೆ ಅಕ್ಕಪಕ್ಕದ ಕ್ಷೇತ್ರದ ಮೇಲೆಯೂ ಸವದಿ ಪ್ರಭಾವ ಇದೆ. ಮಗನಿಗೆ ಟಿಕೆಟ್ ಕೊಟ್ಟಿದ್ದೆ ಆದ್ರೆ ಸವದಿ ಆಯಕ್ಟೀವ್ ಆಗಿ ಕೆಲಸ ಮಾಡಿ ಸೀಟ್ ಗೆಲ್ಲಲು ಸಹಕಾರಿಯಾಗಲಿದ್ದಾರೆ. ಚಿದಾನಂದ ಸವದಿಗೆ ಟಿಕೆಟ್ ಕೊಟ್ಟರೆ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಂತೆ. ಬಿಜೆಪಿ ನಾಯಕರು ಸವದಿ ಸೆಳೆಯುವುದಕ್ಕೆ ಸುಲಭವಾಗಿ ಬ್ರೇಕ್ ಹಾಕಿದಂತಾಗುತ್ತೆ. ಸವದಿ ಕಾಂಗ್ರೆಸ್ ನಲ್ಲಿ ಆಯಕ್ಟೀವ್ ಆಗಿ ಕೆಲಸ ಮಾಡಲು ಅನುಕೂಲವಾಗುತ್ತೆ ಎಂದು ಕಾಂಗ್ರೆಸ್ ಚಿಂತಿಸುತ್ತಿದ್ದು ಚಿದಾನಂದ ಸವದಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ

Spread the loveಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ