Breaking News

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್

Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.

ಲಾಬೂರಾಮ್ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಸ್ ಡಿಎಂ ವೈದ್ಯ ಡಾ.ಕಿರಣ್ ಹೆಗಡೆ ತಿಳಿಸಿದ್ದಾರೆ.

ಲಾಬೂರಾಮ್ ಅವರಿಗೆ ಗಂಟಲಿನಲ್ಲಿ ಬಾವು ಕಾಣಿಸಿಕೊಂಡಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನ ಗೊತ್ತಿರುವ ವೈದ್ಯರಿಂದ ಕೊಡಿಸುವುದಾಗಿ ಕುಟುಂಬದವರು ಹೇಳಿರುವ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ