Breaking News

ಈ ಮೂರು ಕ್ಷೇತ್ರಗಳ ಮೇಲೆ ಶೆಟ್ಟರ್​ ಸ್ಪರ್ಧಿಸುವ ಸುಳಿವು ನೀಡಿದ ಜಗದೀಶ್ ಶೆಟ್ಟರ್

Spread the love

ಹುಬ್ಬಳ್ಳಿ, (ಫೆಬ್ರವರಿ 10): ಕಾಂಗ್ರೆಸ್‌ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadish Shettar) ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ (Loksabha Election 2024) ಸ್ಪರ್ಧಿಸುವ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಹೊರಹಾಕಿದ್ದಾರೆ. ವರಿಷ್ಠರು ಸ್ಪರ್ಧೆ ಮಾಡಿ‌ ಅಂದ್ರೆ ಮಾಡೋಕೆ ಸಿದ್ದ. ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡೋಕೆ ಸಿದ್ಧ ಎಂದು ಹೇಳಿದ್ದಾರೆ. ಈ ಮೂಲಕ ಶೆಟ್ಟರ್​ ಈ ಬಾರಿಯ ಲೋಕಸಭಾ ಚುನಾವಣಾ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ. ಅಲ್ಲದೇ ಜಗದೀಶ್ ಶೆಟ್ಟರ್ ಅವರಿಗೆ​ ಲೋಕಸಭೆ ಟಿಕೆಟ್​​ ಆಫರ್​ ನೀಡಿ ಬಿಜೆಪಿಗೆ ಕರೆತರಲಾಗಿದೆ ಎನ್ನುವ ಸುದ್ದಿಗೆ ಈಗ ರೆಕ್ಕೆಪುಕ್ಕಗಳು ಬಂದಂತಾಗಿವೆ.

 

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ ಜಗದೀಶ್ ಶೆಟ್ಟರ್​: ಕ್ಷೇತ್ರ ಯಾವುದು ಗೊತ್ತಾ?

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದು(ಫೆಬ್ರವರಿ 10) ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್​, ವರಿಷ್ಠರು ಹೇಳಿದ್ರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ. ಧಾರವಾಡ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ಧ. ವರಿಷ್ಠರು ಹೇಳಿದ್ರೆ ಸ್ಪರ್ಧಿಸುತ್ತೇನೆ, ಇಲ್ಲ ಪಕ್ಷದ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಧಾರವಾಡ ಸೇರಿದಂತೆ ಎಂದು ಹೇಳಿರುವುದು ಸಂಚಲನ ಮೂಡಿಸಿದೆ.

ಯಾಕಂದ್ರೆ, ಪ್ರಲ್ಹಾದ್ ಜೋಶಿ ಪ್ರತಿನಿಧಿಸುವುದು ಧಾರವಾಡ ಕ್ಷೇತ್ರ ಅದು. ಅವರು ಮತ್ತೊಮ್ಮೆ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದಾರೆ. ಇದರ ಮಧ್ಯೆ ಜಗದೀಶ್ ಶೆಟ್ಟರ್ ಅವರ ಈ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ. ಒಂದು ವೇಳೆ ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್​ ಶೆಟ್ಟರ್​ ಸಿಕ್ಕರೆ ಹಾಲಿ ಸಂಸದ, ಕೇಂದ್ರ ಸಚಿವರಾರಿಗುವ ಪ್ರಭಾವಿ ಪ್ರಲ್ಹಾದ್ ಜೋಶಿ ಅವರ ಕತೆ ಏನು ಎನ್ನುವುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಈ ಮೂರು ಕ್ಷೇತ್ರಗಳ ಮೇಲೆ ಶೆಟ್ಟರ್​

ಧಾರವಾಡ, ಗದಗ-ಹಾವೇರಿ ಹಾಗೂ ಬೆಳಗಾವಿ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳು ಹೆಚ್ಚಿವೆ. ಜೊತೆಗೆ ಬಿಜೆಪಿಯ ಭದ್ರಕೋಟೆಗಳು ಸಹ ಹೌದು. ಹಾಗಾಗಿ ಜಗದೀಶ್ ಶೆಟ್ಟರ್​ ಈ ಮೂರೂ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ಈ ಮೂರು ಕ್ಷೇತ್ರಗಳ ಪೈಕಿ ಹೈಕಮಾಂಡ್​ ಹೇಳಿದ ಒಂದು ಕ್ಷೇತ್ರದಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ ಎಂದು ತಿಳಿದಬಂದಿದೆ.


Spread the love

About Laxminews 24x7

Check Also

ಬೆಳಗಾವಿ: ಕೈಲಾಸಕ್ಕೆ ಕರೆದೊಯ್ಯುವ ನಂಬಿಕೆ, ದೇಹತ್ಯಾಗಕ್ಕೆ ಮುಂದಾದ ಕುಟುಂಬ; ಅಧಿಕಾರಿಗಳಿಂದ ತಡೆ

Spread the loveಚಿಕ್ಕೋಡಿ (ಬೆಳಗಾವಿ): ಇಂದಿನ ಆಧುನಿಕ ದಿನಗಳಲ್ಲೂ ಕುಟುಂಬವೊಂದು ಆಶ್ರಮವೊಂದರ ಚಿಂತನೆಗಳನ್ನು ಅನುಕರಿಸಿ ದೇಹತ್ಯಾಗಕ್ಕೆ ಮುಂದಾದ ಘಟನೆ ಜಿಲ್ಲೆಯ ಅಥಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ