Breaking News

ಮೋದಿಯವರ 10 ವರ್ಷ ಭಾರತದ ವಿನಾಶ ಕಾಲ:C.M.

Spread the love

ಬೆಂಗಳೂರು: ಕಳೆದ 10 ವರ್ಷಗಳ ಬಿಜೆಪಿ (BJP) ಆಡಳಿತವನ್ನು ಮೋದಿಯವರು (Narendra Modi) ಮತ್ತು ಬಿಜೆಪಿಯ ನಾಯಕರು ಅಮೃತ ಕಾಲ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು.

 

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಎಂ, 10 ವರ್ಷ ಅನ್ಯಾಯದ ಕಾಲ ಎಂದು ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಮೋದಿಯವರ ಅನ್ಯಾಯ ಕಾಲದ ವಿವರಗಳನ್ನು ಅಂಕಿಅಂಶಗಳ ಸಹಿತ ಕರ್ನಾಟಕದ ಜನತೆಯ ಮುಂದೆ ಇಡುತ್ತಿದ್ದೇನೆ. ದೇಶ ಇಂದು ಅಮೃತ ಕಾಲದಲ್ಲಿ ಇದೆಯೋ? ಅನ್ಯಾಯದ ಕಾಲದಲ್ಲಿ ಇದೆಯೋ? ಎಂದು ಜನರೇ ತೀರ್ಮಾನಿಸಲಿ ಎಂದು ಹೇಳಿದರು.

ಕಳೆದ ಹತ್ತು ವರ್ಷಗಳ ಬಿಜೆಪಿ (BJP) ಆಡಳಿತದಲ್ಲಿ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟ ಕಾರ್ಪಣ್ಯಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿದೆ ಎಂದು ವಾಗ್ದಾಳಿ ನಡೆಸಿದರು.

ರೈತರ ಆದಾಯದ ದುಪ್ಪಟ್ಟು, ಯುವಜನರಿಗೆ ವಾರ್ಷಿಕ 2 ಕೋಟಿ ಉದ್ಯೋಗ, ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳಿಗೆ ರಕ್ಷಣೆ, ಅಗ್ಗದ ದರದಲ್ಲಿ ಅಗತ್ಯವಸ್ತುಗಳ ಪೂರೈಕೆ ಮೊದಲಾದ ಬಣ್ಣಬಣ್ಣದ ಭರವಸೆಗಳನ್ನು ನೀಡಿ ಮೋದಿಯವರು ಚುನಾವಣೆಯಲ್ಲಿ ಗೆದ್ದಿದ್ದರು. ಗೆದ್ದ ನಂತರ ಜನರಿಗೆ ನೀಡಿದ್ದ ಭರವಸೆಗಳನ್ನು ಮರೆತು ದೇವರು-ಧರ್ಮದ ಹೆಸರಿನ ಭಾವನಾತ್ಮಕ ರಾಜಕಾರಣ, ಉದ್ಯಮಿಗಳ ತುಷ್ಠೀಕರಣದಲ್ಲಿ ಮುಳುಗಿ ಹೋಗಿದ್ದಾರೆ ಎಂದು ಗುಡುಗಿದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ