Breaking News

ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

Spread the love

ಬೆಂಗಳೂರು, : ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ಕಿಡಿಕಾರಿದ್ದಾರೆ. ಈ ಕುರಿಯಾಗಿ ‘ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ ಪ್ರಶ್ನೆಗಳು’ ಎಂದು ಟ್ವೀಟ್ ಮಾಡಿದ್ದು, ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ ಎಂದು ವಾಗ್ದಾಳಿ ಮಾಡಿದ್ದಾರೆ.

ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

 

 

ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ”ಭಾರತ್ ಬ್ರಾಂಡ್” ಎಂಬ ಹೆಸರಿನಲ್ಲಿ ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ ಎಂದು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ