ಮೈಸೂರು, : ಜಿಲ್ಲೆಗೆ ಕೇಂದ್ರ ಗೃಹ ಸಚಿವುಅಮಿತ್ ಶಾ (Amit Shah)ಆಗಮನ ಹಿನ್ನೆಲೆ ಮೈಸೂರು ಕಾಂಗ್ರೆಸ್ (Congress) ಘಟಕದಿಂದ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ. ಮೈಸೂರು (Mysuru) ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದಲ್ಲಿ “ನನ್ನ ತೆರಿಗೆ ನನ್ನ ಹಕ್ಕು” ಘೋಷಣೆಯೊಂದಿಗೆ “ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?” ಎಂಬ ಪ್ರಶ್ನೆಯೊಂದಿಗೆ ಪೋಸ್ಟರ್ ಅಭಿಯಾನ ನಡೆಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ.
ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲು ಜಿಲ್ಲಾ ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಇಷ್ಟೆಲ್ಲಾ ಆದರೂ ಅಮಿತ್ ಶಾ ಅವರನ್ನು ಕೈ ಪಡೆ ಸ್ವಾಗತ ಕೋರಿದ್ದು, ಕನ್ನಡ ನಾಡಲ್ಲಿ ಅತಿಥ್ಯಕ್ಕೆ ಬರವಿಲ್ಲ. ದ್ರೋಹಿಗಳನ್ನು ಕ್ಷಮಿಸು ಮರೆವಿಲ್ಲ ಅಂತಾ ಘೋಷ ವಾಕ್ಯ ಸಿದ್ಧಮಾಡಿದ್ದಾರೆ.
ದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿತ್ತು. ಕರ್ನಾಟಕ ಸರ್ಕಾರದ ತೆರಿಗೆ ಆರೋಪಕ್ಕೆ ಸ್ವತಃ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮಾನ್ ಪ್ರತಿಕ್ರಿಯಿಸಿದ್ದು, ಅಂಕಿ-ಅಂಶಗಳ ಸಮೇತ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ತಾರತಮ್ಯ ಮಾಡಿದೆ ಎಂಬುದು ತಪ್ಪು ಮಾಹಿತಿ ನೀಡುತ್ತಿದೆ. ಇಲ್ಲಿಯವರೆಗೆ ಒಟ್ಟು 12,476 ಕೋಟಿ ರೂ.ಗಳಲ್ಲಿ 6196 ಕೋಟಿ ರೂ. ನೀಡಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದರು.
ಅದಾಗ್ಯೂ, ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳನ್ನು ಮುಂದುವರಿಸಿದ್ದು, ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.