Breaking News

ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆಗೆ ಮೊದಲ ಆದ್ಯತೆ ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಸಿಗ್ನಲ್ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

Spread the love

ಬೆಂಗಳೂರು,ನ.13- ಉಪಚುನಾವಣೆ ಪೂರ್ಣಗೊಂಡ ಕೂಡಲೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಭರವಸೆ ನೀಡಿದ್ದರು. ಆದರೆ, ಇದೀಗ ನವೆಂಬರ್ 20ಕ್ಕೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಬಂದ ಬಂಡಾಯಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷದ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆ ಕುರಿತು ಕೇಂದ್ರೀಯ ನಾಯಕತ್ವ ಮುಖ್ಯಮಂತ್ರಿಗಳ ಕೈಗಳನ್ನು ಕಟ್ಟಿಹಾಕಿದಂತಾಗಿದೆ.

ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ತಡವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಮತ್ತಷ್ಟು ಶಕ್ತಿ ಹೆಚ್ಚಿಸಿಕೊಂಡಿರುವ ಬಿಜೆಪಿಯಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಓಡಾಟ ಹೆಚ್ಚಿಸುವಂತೆ ಮಾಡಿದೆ.

ಕೇಂದ್ರೀಯ ನಾಯಕರು ಸಂಪುಟ ವಿಸ್ತರಣಗೆ ಗ್ರೀನ್ ಸಿಗ್ನಲ್ ನೀಡುವವರೆಗೂ ಮುಖ್ಯಂತ್ರಿಗಳು ಏನನ್ನೂ ಮಾಡಲು ಸಾಧ್ಯವಿಲ್ಲ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರೀಯ ನಾಯಕರನ್ನು ಭೇಟಿ ಮಾಡಿ ಈ ಬಗ್ಗೆ ಅನುಮತಿ ಕೋರಿದ್ದಾರೆ. ಆದರೆ, ನವೆಂಬರ್ 20ರವರೆಗೂ ಅನುಮತಿ ನೀಡಲು ಸಾಧ್ಯವಿಲ್ಲ ಎಂದಿದ್ದು, ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ