ಮೈಸೂರು, : ಬಿಜೆಪಿಯ (BJP) ಚುನಾವಣಾ ಚಾಣಕ್ಯ ಅಮಿತ್ ಶಾ (Amit Shah) ಅವರ ಮೈಸೂರು (Mysuru) ಪ್ರವಾಸ ಯಶಸ್ವಿಯಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಭಾನುವಾರ ಸಂಜೆ ತಿಳಿಸಿದರು. ಮೈಸೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಮುಖಂಡರ ಜತೆ ಚರ್ಚೆಯಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕೂಡ ಎನ್ಡಿಎ ಮೈತ್ರಿಕೂಟ ಗೆಲ್ಲುವ ವಾತಾವರಣ ಇದೆ. ಪ್ರತಿ ಬೂತ್ನಲ್ಲೂ ಶೇ 10ರ ವೋಟ್ ಹೆಚ್ಚಳ ಮಾಡಬೇಕು ಎಂದು ಹೇಳಿದರು.
ಅಮಿತ್ ಶಾ ಅವರ ಮೈಸೂರು ಪ್ರವಾಸ ನಮಗೆ ಬಹಳ ಹುಮ್ಮಸ್ಸು ತಂದಿದೆ. ಶೀಘ್ರದಲ್ಲೇ ಸೀಟ್ ಹಂಚಿಕೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. ಆದರೆ ಕೋರ್ ಕಮಿಟಿ ಸಭೆಯಲ್ಲಿ ಸೀಟ್ ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಚರ್ಚೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೊಟ್ಟ ಕುದುರೆ ಏರದವನು ಶೂರನು ಅಲ್ಲ, ಧೀರನೂ ಅಲ್ಲ ಎಂದರು.