2024: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 370 ಸೀಟುಗಳನ್ನು ಗೆಲ್ಲಲಿದೆ: ಮೋದಿ

Spread the love

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಚಾರವನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಪ್ರದೇಶದ ಜಬುವಾ ಗೆ ಭೇಟಿ ನೀಡಿದ್ದಾರೆ. ಮಧ್ಯಪ್ರದೇಶದ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮೀಸಲಿಟ್ಟ ಆರು ಲೋಕಸಭಾ ಸ್ಥಾನಗಳಲ್ಲಿ ಒಂದಾದ ಝಬುವಾದಲ್ಲಿ ಆದಿವಾಸಿಗಳ ಮೆಗಾ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು.
ಇದೇ ವೇಳೆ ರಾಜ್ಯಕ್ಕೆ 7,550 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.ಮುಂಬರಲಿರುವಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಬಿಜೆಪಿಯು ಏಕಾಂಗಿಯಾಗಿ 370 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ 7550 ಕೋಟಿ ರೂ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿದರು. ತನಗೆ ಮತ್ತು ತಮ್ಮ ಪಕ್ಷಕ್ಕೆ ಬುಡಕಟ್ಟು ಸಮುದಾಯ ಮತ ಬ್ಯಾಂಕ್ ಅಲ್ಲ ಅದು ದೇಶದ ಹೆಮ್ಮೆ, ಈ ಬಾರಿ ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2024 ರ ಚುನಾವಣೆಗೆ ಮುನ್ನ ರಾಜ್ಯಕ್ಕೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದು. ನಾನು ಮಧ್ಯಪ್ರದೇಶಕ್ಕೆ ಚುನಾವಣಾ ಪ್ರಚಾರಕ್ಕಾಗಿ ಬಂದಿಲ್ಲ, ಆದರೆ ಜನರ ಸೇವೆಗಾಗಿ ಬಂದಿದ್ದೇನೆ ಎಂದು ಹೇಳಿದರು. ಮಧ್ಯಪ್ರದೇಶವು ಬುಡಕಟ್ಟು ಜನಾಂಗದವರಿಗೆ ಮೀಸಲಾದ ಆರು ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವುದರಿಂದ ರಾಜ್ಯದಲ್ಲಿ ಪ್ರಧಾನಿ ಮೋದಿಯವರ ಪ್ರಚಾರವು ಮಹತ್ವ ಪಡೆದಿದೆ.

ಕಳೆದ ಬಾರಿ, ನವೆಂಬರ್ 17, 2023 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ ನಂತರ ಅವರು ಡಿಸೆಂಬರ್ 13 ರಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಧ್ಯಪ್ರದೇಶಕ್ಕೆ ಹೋಗಿದ್ದರು.

ಮೋದಿ ಆಹಾರ್ ಅನುದನ್ ಯೋಜನೆಯ ಸುಮಾರು ಎರಡು ಲಕ್ಷ ಮಹಿಳಾ ಫಲಾನುಭವಿಗಳಿಗೆ ಮಾಸಿಕ ಕಂತುಗಳನ್ನು ವಿತರಿಸಿದರು. ಇದರ ಅಡಿಯಲ್ಲಿ ವಿಶೇಷವಾಗಿ ಹಿಂದುಳಿದ ಬುಡಕಟ್ಟುಗಳ ಮಹಿಳೆಯರಿಗೆ ಪೌಷ್ಟಿಕ ಆಹಾರಕ್ಕಾಗಿ ತಿಂಗಳಿಗೆ 1,500 ರೂ. ನೀಡಲಾಗುತ್ತದೆ.


Spread the love

About Laxminews 24x7

Check Also

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಿ- ಕಡಾಡಿ

Spread the love ಬೆಳಗಾವಿ: ‘ಇಂದಿನ ಮಕ್ಕಳು ಮತ್ತು ಯುವಜನರು ವಿದ್ಯಾರ್ಥಿ ಹಂತದಿಂದಲೇ ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ರಾಜ್ಯಸಭಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ