Breaking News

ಹೆಲ್ಮೆಟ್​ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ಕೈಕಚ್ಚಿದ ಬೈಕ್ ಸವಾರ

Spread the love

ಬೆಂಗಳೂರು, (ಫೆಬ್ರವರಿ 21): ಹೆಲ್ಮೆಟ್​ ಸಂಬಂಧ (helmet) ಸಂಚಾರಿ ಪೊಲೀಸರು (Traffic Police) ಹಾಗೂ ವಾಹನ ಸವಾರರ ನಡುವೆ ಕಿರಿಕ್ ನಡೆಯುತ್ತಿರುತ್ತವೆ. ಆದ್ರೆ, ಇಲ್ಲೋರ್ವ ಬೈಕ್ ಸವಾರ ಹೆಲ್ಮೆಟ್ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೊಲೀಸ್ ಪೇದೆಯ ಕೈಕಚ್ಚಿದ್ದಾನೆ. ಬೆಂಗಳೂರಿನ (Bengaluru) ವಿಲ್ಸನ್ ಗಾರ್ಡನ್ 10ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದೆ. ಬಳಿಕ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ಕರೆಸಿ ಬೈಕ್​ ಸವಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಬೈಕ್​ ಸವಾರನ ವಿರುದ್ಧ ಸಂಚಾರಿ ಪೊಲೀಸರು ದೂರು ದಾಖಲಿಸಿದ್ದಾರೆ.

ಹೆಲ್ಮೆಟ್​ ಹಾಕದಿರುವ ಬೈಕ್ ಸವಾರನನ್ನು ಸಂಚಾರಿ ಪೊಲೀಸ್​ ಪೇದೆ ಅಡ್ಡಹಾಕಿದ್ದಾರೆ. ಬಳಿಕ ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿ ಕೀ ಕಿತ್ತುಕೊಂಡಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ದಾದ ನಡೆದಿದ್ದು, ಕೊನೆಗೆ ಬೈಕ್​ ಸವಾರ ಸಿಟ್ಟಿನಿಂದ ಕೀ ಕೊಡುವಂತೆ ಪೊಲೀಸ್​ ಕಾನ್ಸ್​ಟೇಬಲ್​ ಕೈ ಕಚ್ಚಿದ್ದಾನೆ. ಕೂಡಲೇ ಕಾನ್ಸ್​ಟೇಬಲ್ ಹೊಯ್ಸಳಗೆ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.


Spread the love

About Laxminews 24x7

Check Also

ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (

Spread the loveಬೆಂಗಳೂರು, ಜುಲೈ 1: ‘ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (BR Patil) ಆಡಿದ್ದ ಅಬ್ಬರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ