Breaking News

ಮರಳು ದಂಧೆಗೆ ಕಾಂಗ್ರೆಸ್​​ ಮುಖಂಡ ಡಾ. ಶಶಿಧರ್ ಹಟ್ಟಿ ಬಲಿ

Spread the love

ಗದಗ, ಫ್ರಬವರಿ 13: ಮರಳು ದಂಧೆಗೆ (Illegal Sand Mining) ಕಾಂಗ್ರೆಸ್​​ (Congress) ಮುಖಂಡ ಡಾ. ಶಶಿಧರ್ ಹಟ್ಟಿ (Dr Shashidhar Hatti) ಬಲಿಯಾಗಿದ್ದಾರೆ. ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಶಶಿಧರ್ ಡೆತ್​ನೋಟ್ ಬರೆದಿಟ್ಟು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಲುಂಗಿಯಿಂದ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರನ್ನು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಎಲ್ಲಾ ಲೆಕ್ಕ ಕೊಟ್ಟರೂ ಶರಣಗೌಡ ಪದೇಪದೇ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ಮನನೋಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಉಸ್ತುವಾರಿ ಸಚಿವ ಹೆಚ್​​ಕೆ ಪಾಟೀಲರಿಗೆ ಹೇಳಿ ಶರಣಗೌಡಗೆ ಕಠಿಣ ಶಿಕ್ಷೆ ಕೊಡಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಹೇಳಿ ಎಗ್ಗಿಲ್ಲದೇ ನಡೆಯುತ್ತಿರುವ ಬಗ್ಗೆ ಇತ್ತೀಚೆಗೆ ‘ಟಿವಿ9’ ವಿಸ್ತೃತ ವರದಿ ಪ್ರಕಟಿಸಿತ್ತು. ಕಾನೂನು ಸಚಿವರ ತವರಲ್ಲೇ ಕಾನೂನು ಮಂಗಮಾಯವಾಗಿರುವ ಬಗ್ಗೆ ಮತ್ತು ತುಂಗಭದ್ರಾ ನದಿಯಲ್ಲಿ ಅಪಾಯಕಾರಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ಸಾಗಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ತುಂಗಭದ್ರಾ ನದಿ ಪಾತ್ರದಲ್ಲಿ ಯಾವುದೇ ಮರಳು ಟೆಂಡರ್ ಇಲ್ಲ. ಮರಳು ಗಣಿಗಾರಿಕೆ ಸಂಪೂರ್ಣ ಅಕ್ರಮವಾಗಿದೆ. ಹಗಲು ರಾತ್ರಿ ಎನ್ನದೇ ದಂಧೆಕೋರರು ನದಿ ಒಡಲು ಬಗೆದು ಮರಳು ಬಾಚುತ್ತಿದ್ದಾರೆ. ಸಿಂಗಟಾಲೂರ, ಶೀರನಹಳ್ಳಿ, ಹೆಸರೂರ ಸೇರಿದಂತೆ ನದಿ ಪಾತ್ರದ ಗ್ರಾಮಗಳಲ್ಲಿ ಅಕ್ರಮ ಮರಳು ದಂಧೆ ಸಾಗುತ್ತಿರುವ ಬಗ್ಗೆಯೂ ವರದಿ ಪ್ರಕಟಿಸಲಾಗಿತ್ತು


Spread the love

About Laxminews 24x7

Check Also

ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ಸರ್ಕಾರಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ: ಯತ್ನಾಳ

Spread the love ದಾವಣಗೆರೆ: ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ