Breaking News

ಲೋಕಸಭಾ ಚುನಾವಣೆ: ಮಂಡ್ಯ ಕಣದಿಂದ ಹಿಂದೆ ಸರಿದ ನಿಖಿಲ್, ಯಾರಿಗೆ ಸಿಗಲಿದೆ ಜೆಡಿಎಸ್ ಟಿಕೆಟ್, ಮಹತ್ವದ ಸಭೆ

Spread the love

ಮಂಡ್ಯ, ಫೆ.13: ನಾನು ಮಂಡ್ಯ ಲೋಕಸಭಾ ಕ್ಷೇತ್ರದ (Mandya Loksabha Election) ಟಿಕೆಟ್‌ ಆಕಾಂಕ್ಷಿ ಅಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಮಂಡ್ಯ ಲೋಕಸಭಾ ಅಖಾಡದಿಂದ ಹಿಂದೆ ಸರಿದಿದ್ದಾರೆ. ಹಾಗಿದ್ರೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಎದ್ದಿದೆ. ಅಭ್ಯರ್ಥಿ ಆಯ್ಕೆ ಮತ್ತೆ ದಳಪತಿಗಳಿಗೆ ಗೊಂದಲವಾಗಿದೆ.

ಮಂಡ್ಯ ಲೋಕಸಭಾ ಅಖಾಡದಿಂದ ನಿಖಿಲ್ ಹಿಂದೆ ಸರಿದ ಹಿನ್ನಲೆ ಇದೀಗ ಹೆಚ್​ಡಿ ಕುಮಾರಸ್ವಾಮಿ ಅವರ ಬಳಿಗೆ ನಾಯಕರು ಹೋಗಲಿದ್ದಾರೆ. ಕುಮಾರಸ್ವಾಮಿ ಅವರೇ ಅಭ್ಯರ್ಥಿ ಆಗಬೇಕೆಂದು ದಳಪತಿಗಳು ಒತ್ತಡ ಹಾಕಲಿದ್ದಾರೆ. ನೀವು ಬನ್ನಿ ಇಲ್ಲ ನಿಖಿಲ್ ಮನವೊಲಿಸಿ ಎಂದು ಕುಮಾರಸ್ವಾಮಿಗೆ ಮನವಿ ಮಾಡಲಿದ್ದಾರೆ. ಮಂಡ್ಯದಿಂದ ಮಾಜಿ ಸಚಿವರಾದ ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್‌ಗೌಡ ಟಿಕೆಟ್ ಆಕಾಂಕ್ಷಿತರು. ಮೂವರಲ್ಲಿ ಒಬ್ಬರು ಸ್ಪರ್ಧೆ ಮಾಡಿ ನಾವು ಇರ್ತೀವಿ ಎಂದು ಕುಮಾರಸ್ವಾಮಿ ಅವರು ಹೇಳುವ ಸಾಧ್ಯತೆ ಇದೆ. ಇಲ್ಲ ನಿಖಿಲ್ ಮನವೊಲಿಸಲು ಪ್ರಯತ್ನ ಮಾಡುವ ಸಾಧ್ಯತೆ ಇದೆ. ಅಥವಾ ತಾವೇ ಮಂಡ್ಯ ಅಖಾಡಕ್ಕೆ ಪ್ರವೇಶ ಮಾಡ್ತಾರಾ ಎಂಬುವುದನ್ನು ಕಾದು ನೋಡಬೇಕಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ