Breaking News

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಪ್ರಮುಖ ಸ್ವಾಮೀಜಿಗೆ ಬಿಜೆಪಿ ಟಿಕೆಟ್?‌

Spread the love

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಸನ್ನದ್ದವಾಗುತ್ತಿರುವ ಬಿಜೆಪಿ, ರಾಜ್ಯದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಸರ್ಚಿಂಗ್‌ ನಡೆಸಿದೆ. ಗೆಲ್ಲುವ ಕುದುರೆಗಳ ಬೆನ್ನು ಬಿದ್ದಿರುವ ಕಮಲ ಪಕ್ಷ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆಯಂತೆ.

 

ಕಳೆದ 2019ರ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಪ್ರಯತ್ನವನ್ನು ನಡೆಸಿ ವಿಫಲವಾಗಿದ್ದ ಸಂಘ ಪರಿವಾರ ಮತ್ತು ಬಿಜೆಪಿ ಈ ಬಾರಿಯ ಚುನಾವಣೆಗೂ ಮತ್ತೊಮ್ಮೆ ಪ್ರಯತ್ನ ಮುಂದುವರೆಸಿವೆ ಎನ್ನಲಾಗಿದೆ.

ಚಿತ್ರದುರ್ಗ ಕ್ಷೇತ್ರದ ಹಾಲಿ ಸಂಸದರಾಗಿರುವ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾಗಿರುವ ಎ.ನಾರಾಯಣಸ್ವಾಮಿ ಅವರಿಗೆ ಈ ಬಾರಿ ಟಕೆಟ್ ನೀಡುವ ಬಗ್ಗೆ ಪಕ್ಷದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಜತೆಗೆ ನಾರಾಯಣಸ್ವಾಮಿ ಅವರಿಗೂ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಕಡಮೆಯಾಗಿದೆಯಂತೆ.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರು ರಾಜಕಾರಣದಲ್ಲಿ ಮುಂಚೂಣಿಗೆ ಬಂದ ರೀತಿಯಲ್ಲೇ ಕರ್ನಾಟಕದ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಮುಂಚೂಣಿಗೆ ಕರೆತರಬೇಕು ಎಂಬುದು ಸಂಘ ಪರಿವಾರದ ಲೆಕ್ಕಾಚಾರ.


Spread the love

About Laxminews 24x7

Check Also

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.

Spread the love ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ