ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ. ಶಿರಸಿ: ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ.
ಮಾಹಿತಿ ಪ್ರಕಾರ ಬಾವಿ ತೋಡಲು ಯಾವುದೇ ಪರವಾನಗಿ ಪಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾದ ಅಧಿಕಾರಿಗಳು, ಬಾವಿ ತೋಡುತ್ತಿದ್ದ ಗೌರಿಯನ್ನು ತಡೆದಿದ್ದಾರೆ ಎಂದು ಸ್ಥಳೀಯರು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳ ಕುಡಿಯುವ ನೀರಿನ ಅವಶ್ಯಕತೆಗಳನ್ನು ಪೂರೈಸಲು ಗೌರಿ ನಾಯ್ಕ್ ಬಾವಿ ತೋಡುತ್ತಿದ್ದರು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಮುಂದಿಟ್ಟುಕೊಂಡು ಬಾವಿ ಅಗೆಯುವುದನ್ನು ನಿಲ್ಲಿಸಲಾಯಿತು.
ಅಗೆದ ಸ್ಥಳದಲ್ಲಿ ಮಕ್ಕಳು ಬೀಳದಂತೆ ಅಧಿಕಾರಿಗಳು ಶೀಟ್ನಿಂದ ಮುಚ್ಚಿದ್ದಾರೆ.