Breaking News

ಚುನಾವಣೆ ಹೊತ್ತಲ್ಲೇ ಬೆಳಗಾವಿ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ

Spread the love

ಬೆಳಗಾವಿ, ಫೆಬ್ರವರಿ 13: ಲೋಕಸಭೆ ಚುನಾವಣೆ (Lok Sabha Elections) ಇನ್ನೇನು ಸಮೀಪಿಸುತ್ತಿದೆ ಎಂಬ ಹೊತ್ತಿನಲ್ಲಿಯೇ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಎಂಬ ಜೇನಗೂಡಿಗೆ ಕಾಂಗ್ರೆಸ್ ಸರ್ಕಾರ (Congress Government) ಕೈಹಾಕುತ್ತಿರುವಂತಿದೆ. ಬೆಳಗಾವಿ ಜಿಲ್ಲೆ ರಾಜಕೀಯ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಈ ಅಸ್ತ್ರವನ್ನು ಪ್ರಯೋಗ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಬಂದರೂ ಬೆಳಗಾವಿ ಜಿಲ್ಲೆ ಅಧಿಕಾರದ ಕೇಂದ್ರ ಬಿಂದು. ಬೆಳಗಾವಿ ರಾಜಕಾರಣಿಗಳ ಪ್ರತಿಷ್ಠೆಗೆ ಸರ್ಕಾರಗಳೇ ಪತನವಾದ ಉದಾಹರಣೆಗಳೂ ಇವೆ.

 

Belagavi: ಚುನಾವಣೆ ಹೊತ್ತಲ್ಲೇ ಬೆಳಗಾವಿ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ

ಭೌಗೋಳಿಕವಾಗಿ ರಾಜ್ಯದಲ್ಲಿ ಎರಡನೇ ‌ಅತಿ ದೊಡ್ಡ ‌ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಗಡಿ ವಿವಾದದ ಕಾರಣಕ್ಕೆ ಜಿಲ್ಲೆ ವಿಭಜನೆ ಪ್ರಸ್ತಾವ ನೆನೆಗುದ್ದಿಗೆ ಬಿದ್ದಿತ್ತು. ಆದರೆ, ಈಗ ಚುನಾವಣೆ ಹೊತ್ತಲ್ಲೇ ಸರ್ಕಾರ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿದೆ.

ಮತ್ತೊಂದೆಡೆ ಪ್ರತ್ಯೇಕ ಜಿಲ್ಲೆಗಾಗಿ ಗೋಕಾಕ್, ಬೈಲಹೊಂಗಲ, ಚಿಕ್ಕೋಡಿ ಹಾಗೂ ಅಥಣಿ ಜನರಿಂದ ಹೋರಾಟ‌ ನಡೆಯುತ್ತಿದೆ. ಹಲವು ದಕಶಗಳಿಂದ ಜಿಲ್ಲೆ ವಿಭಜನೆ ಕೂಗು‌ ಕೇಳಿ ಬರುತ್ತಿದೆ. ಈ ಮಧ್ಯೆ, ಜಿಲ್ಲಾ ವಿಭಜನೆ ಸಂಬಂಧ ಸಮಗ್ರ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಸರ್ಕಾರ ನಿರ್ದೇಶನ ನೀಡಿದೆ. ಸಮಗ್ರ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನ್ನವರಗೆ ಸರ್ಕಾರ ಪತ್ರ ಬರೆದಿದೆ.

ಸದ್ಯ ಅಸ್ತಿತ್ವದಲ್ಲಿರುವ ಉಪವಿಭಾಗ, ತಾಲೂಕು-ಹೋಬಳಿ ಮಧ್ಯೆ ಇರುವ ವ್ಯಾಪ್ತಿ ವಿವರ, ಸಾರ್ವಜನಿಕರು ನಿತ್ಯ ಎದುರಿಸುತ್ತಿರುವ ಸಮಸ್ಯೆಗಳೇನು? ಜನಸಂಖ್ಯೆ ಎಷ್ಟು? ಮೂಲಸೌಕರ್ಯ ಹಾಗೂ ಭೌಗೋಳಿಕ ವಿಸ್ತೀರ್ಣ ಒಳಗೊಂಡ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ.

 


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ