ನವದೆಹಲಿ (NewDelhi): ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ (soniagandhi) ಇಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ (rahulgandhi), ಪ್ರಿಯಾಂಕಾ ಗಾಂಧಿ ವಾದ್ರಾ (priyankagandhivadra) ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದೆ.
ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್ (congress) ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿರುವುದಾಗಿ ವರದಿಯಾಗಿದೆ.
ಫೆಬ್ರವರಿ 27ರಂದು ಚುನಾವಣೆ ನಡೆಯಲಿದ್ದು, ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
Laxmi News 24×7