ಕೊಲ್ಕತ್ತಾ ಪೊಲೀಸರು ಮತ್ತು ಪಕ್ಷದ ಕಾರ್ಯಕರ್ತರ ನಡುವೆ ಸಂಘರ್ಷವೇರ್ಪಟ್ಟಾಗ ನಡೆದ ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಪಶ್ಚಿಮ ಬಂಗಾಳದ (West Bengal) ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ (Sukanta Majumdar) ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊದಲು ಬಸಿರ್‌ಹತ್ ಮಲ್ಟಿ ಫೆಸಿಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕೊಲ್ಕತ್ತಾದಲ್ಲಿರುವ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ (Sandeshkhali) ಬಿಜೆಪಿ ಪ್ರತಿಭಟನೆ ವೇಳೆ ಲಾಠಿಚಾರ್ಜ್ ನಡೆದಿದೆ.ಸಂದೇಶಖಾಲಿಯಲ್ಲಿ ಮಹಿಳೆಯರು ಟಿಎಂಸಿ ನಾಯಕ ಶಾಜಹಾನ್ ಶೇಖ್ ಮತ್ತು ಅವರ ಸಹಾಯಕರು ತಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಆಂದೋಲನ ನಡೆಸುತ್ತಿದ್ದಾರೆ.
ಕಾರಿನಿಂದ ಬಿದ್ದು ಸುಕಾಂತ ಮಜುಂದಾರ್ ಗಾಯಗೊಂಡರು. ತಕ್ಷಣವೇ ಭದ್ರತಾ ಸಿಬ್ಬಂದಿ ಲಾಠಿ ಚಾರ್ಜ್ ಮಾಡಿದರು ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಉತ್ತರ 24 ಪರಗಣ ಜಿಲ್ಲೆಯ ಅಶಾಂತಿ ಪೀಡಿತ ಸಂದೇಶ್‌ಖಾಲಿಗೆ ಮಜುಂದಾರ್ ಭೇಟಿ ನೀಡುವುದನ್ನು ಪಶ್ಚಿಮ ಬಂಗಾಳ ಪೊಲೀಸರು ತಡೆಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಹೇಳಿದ್ದಾರೆ. ‘ಟಿಎಂಸಿ ಎಂದರೆ ತೃಣಮೂಲ ಕಾಂಗ್ರೆಸ್ ಅಲ್ಲ ತಾಲಿಬಾನ್ ಮಾನಸಿಕ್ತಾ ಸಂಸ್ಕೃತಿ. ಒಂದೆಡೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾ ಮಾಟಿ ಮಾನುಷ್ ಬಗ್ಗೆ ಮಾತನಾಡುತ್ತಿದ್ದರೆ, ಇನ್ನೊಂದೆಡೆ ರಾಜ್ಯ ಬಂದ್, ಬಲಾತ್ಕಾರಿ, ಬಾಂಬ್’ ಆಗಿದೆ. ಷಹಜಹಾನ್ ಶೇಖ್ ಮಕ್ತವಾಗಿ ತಿರುಗಾಡುತ್ತಿದ್ದಾರೆ ಎಂದು ಪೂನಾವಾಲಾ ಹೇಳಿದ್ದಾರೆ.