ಬೆಂಗಳೂರು, ಫೆಬ್ರವರಿ 14: ನಗರದ ಸ್ಯಾಂಕಿ ಕೆರೆಯಲ್ಲಿ ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆ(dead body)ಆಗಿರುವಂತಹ ಘಟನೆ ನಡೆದಿದೆ.
ಸ್ಯಾಂಕಿ ಕೆರೆಯಲ್ಲಿ ತೆಲುತ್ತಿದ್ದ ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬಳ್ಳಾರಿಯ ರಾಜೋತ್ಸವ ನಗರದಲ್ಲಿ ರಸ್ತೆ ಬದಿಯ ಚರಂಡಿಯಲ್ಲಿ 2 ದಿನದ ಹಿಂದೆ ಜನನವಾಗಿದ್ದ
ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಚರಂಡಿಯಲ್ಲಿದ್ದ ಶಿಶುವಿನ ಮೃತದೇಹವನ್ನು ಸ್ಥಳೀಯ ನಿವಾಸಿಗಳು ಹೊರತೆಗೆದಿದ್ದಾರೆ. ಸ್ಥಳಕ್ಕೆ ಬ್ರೂಸ್‌ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.