ಬೆಂಗಳೂರು: ಕರ್ನಾಟಕ ವಿಧಾನ ವರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ ಉಪ ಚುನಾವಣೆ ಫೆ.16 ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯತ್ತಿರುವ ವಿಧಾನ ವರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಪ್ರಕ್ಷಣಿಕ ಸಂಸ್ಥೆಗಳಲ್ಲಿ, ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ಫೆ.16 ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದೆ.
ಉಪ ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ಪೂರ್ವಾನುಮತಿಯನ್ನು ಪಡೆಯಬೇಕಾಗಿರುತ್ತದೆ. ಈ ಷರತ್ತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರಿವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂದು ತಿಳಿಸಲಾಗಿದೆ.