Breaking News

ರೈಲಿನಲ್ಲಿ ಮಹಿಳೆಯರ ಸರ ಕಸಿದು ಪರಾರಿಯಾಗುತ್ತಿದ್ದ ಚಾಲಾಕಿಗಳ ಬಂಧನ

Spread the love

ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳರಿಬ್ಬರನ್ನು (Chain theft) ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ದಂಡು (Bengaluru Dandu) ಎಂದು ಕರೆಯಲ್ಪಡುವ ಈ ಕಳ್ಳರ ಗುಂಪು, ರೈಲಿನಲ್ಲಿ ಮಹಿಳೆಯರ ಸರ ಕಸಿದು ಪರಾರಿಯಾಗುತ್ತಿದ್ದರು.

ಬಂಧಿತರನ್ನು ಬಾಲಾಜಿ (Balaji) ಹಾಗೂ ಕಮಲನಾಥನ್ (Kamalnath) ಎಂದು ಗುರುತಿಸಲಾಗಿದೆ. ಜನವರಿ 18 ರಂದು ಬೆಂಗಳೂರು-ಜೋಲಾರ್ಪೇಟೆ (Bengaluru-Jolarpete) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸುಮಿತ್ರಾ (Sumitra) ಎಂಬುವವರ ಸರವನ್ನು, ಬಂಗಾರಪೇಟೆಯ (Bangarpete) ಬಿಸಾನತ್ತಂ ಬಳಿ ಸರ ಕಸಿದು ರೈಲಿನಿಂದ ಜಿಗಿದು ಪರಾರಿಯಾಗಿದ್ದರು.

ಸರ ಕಳೆದುಕೊಂಡಿದ್ದ ಸುಮಿತ್ರಾ ಬಂಗಾರಪೇಟೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆದಾರದ ಮೇಲೆ ಕಾರ್ಯಾಚರಣೆ ನಡೆಸಿದ ರೈಲ್ವೆ ಪೊಲೀಸರು ಸರಗಳ್ಳರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ