Breaking News

ಬಂಜಾರ ಸಮುದಾಯ ಸ್ವಾಭಿಮಾನಿಗಳಾಗಿ, ಸ್ವತಂತ್ರವಾಗಿ ಒಂದು ಕಡೆ ನೆಲೆಸಿ :C.M.

Spread the love

ಬೆಂಗಳೂರು: ಬಂಜಾರ ಸಮುದಾಯ ಸ್ವಾಭಿಮಾನಿಗಳಾಗಿ, ಸ್ವತಂತ್ರವಾಗಿ ಒಂದು ಕಡೆ ನೆಲೆಸಿ ಅಭಿವೃದ್ಧಿ ಕಾಣುವಂತೆ ಪ್ರೇರೇಪಿಸಿದವರು ಸಂತ ಸೇವಾಲಾಲ್ ಆಗಿದ್ದಾರೆ. ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಮೊದಲು ಆದೇಶಿದ್ದೇ ನಮ್ಮ ಸರ್ಕಾರ. ಬಾಕಿ ಉಳಿದಿರುವ ತಾಂಡಾಗಳನ್ನೂ ಕಂದಾಯ ಗ್ರಾಮಗಳನ್ನಾಗಿ (Revenue Village) ಘೋಷಿಸಿ ಎನ್ನುವ ಸ್ಪಷ್ಟ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

 

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಇದ್ದಾಗಲೇ ಸರ್ಕಾರವೇ ಸೇವಾಲಾಲ್ ಜಯಂತಿ ಆಚರಿಸಲು ಆದೇಶಿಸಿದ್ದೆವು. ಸೇವಾಲಾಲ್ ಅವರು ಒಂದು ಜಾತಿ, ಸಮುದಾಯಕ್ಕೆ ಸೇರಿದವರಲ್ಲ. ಅವರು ಮನುಷ್ಯ ಸಮಾಜದ ಬೆಳಕು. ಬಂಜಾರ ಸಮುದಾಯ ವಿದ್ಯಾವಂತರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಪ್ರೇರಣೆ ಆದ ದಾರ್ಶನಿಕ ಸೇವಾಲಾಲ್ ಅವರನ್ನು ಸರ್ಕಾರವೇ ಮುಂದೆ ಗೌರವಿಸಬೇಕು ಎನ್ನುವ ಉದ್ದೇಶದಿಂದಲೇ ಕಾಂಗ್ರೆಸ್ ಸರ್ಕಾರ ಸೇವಾಲಾಲ್ ದಿನಾಚರಣೆಯನ್ನು ಆರಂಭಿಸಿತು ಎಂದು ವಿವರಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ