Breaking News

ಉಸಿರಾಟ ಸಮಸ್ಯೆ: ದೇವೇಗೌಡ ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ಮಾಜಿ ಪ್ರಧಾನಿ (former PM), ಜೆಡಿಎಸ್ (JDS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಹೆಚ್.ಡಿ. ದೇವೇಗೌಡ (H.D. Devegowda) ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ಮಧ್ಯಾಹ್ನ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಳೂರಿನ ಹೆಚ್ ಎಲ್ ಎ ರಸ್ತೆಯ ಮಣಿಪಾಲ ಆಸ್ಪತ್ರೆಗೆ (manipal hospital) ಅವರನ್ನು ದಾಖಲಿಸಲಾಗಿದೆ.

ಮಾಜಿ ಪ್ರಧಾನಿಯವರ ಸದ್ಯದ ಸ್ಥಿತಿ ಸ್ಥಿರವಾಗಿದ್ದು, ತಜ್ಞರ ತಂಡದಿಂದ ನಿಗಾ ವಹಿಸಲಾಗಿದೆ.

ಲೋಕ ಸಭಾ ಚುನಾವಣೆ ಅಭ್ಯರ್ಥಿಗಳ ಕುರಿತಾಗಿ ಉಂಟಾದ ಗೊಂದಲಗಳ ಬಗ್ಗೆ ಮಂಗಳವಾರವಷ್ಟೇ ಅವರು ಜೆಡಿಎಸ್ ನ ಹಿರಿಯ ನಾಯಕರು, ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಗೊಂದಲ ದೂರ ಮಾಡುವ ಪ್ರಯತ್ನ ಮಾಡಿದ್ದರು.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ